ಪಿಹೆಚ್.ಡಿ. ಅಧ್ಯಯನ : ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ರಾಮನಗರ : ಕನಕಪುರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್ ಡಿ ಅಧ್ಯಯನದಲ್ಲಿ ತೊಡಗಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10,000/- ರಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
2021-22ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ದಿನಾಂಕ:30-12-2021 ಸಂಜೆ 5.30. ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್- https://www.bcwd.karnataka.gov.in ದೂರವಾಣಿ ಸಂಖ್ಯೆ 080-27522254 ಸಂಪರ್ಕಿಸುವುದು ಎಂದು ಕನಕಪುರ ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *