ಬೀದಿ ನಾಟಕದ ಮೂಲಕ ಫ್ಲೋರೋಸಿಸ್ ನಿಯಂತ್ರಣ ಕುರಿತು ಜಾಗೃತಿ

ರಾಮನಗರ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಫ್ಲೋರೋಸಿಸ್ ನಿಯಂತ್ರಣ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ ಟೌನ್, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಮತ್ತು ತಡೆಗಟ್ಟುವ ಕಾರ್ಯಕ್ರಮ ಕುರಿತು ಬೀದಿ ನಾಟಕದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಣಾಧಿಕಾರಿ ಲಕ್ಷ್ಮಣ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾತನಾಡಿ ಆರೋಗ್ಯ ಇಲಾಖೆ ವತಿಯಿಂದ ಫ್ಲೋರೋಸಿಸ್ ಕುರಿತು ಬೀದಿ ನಾಟಕದ ಮೂಲಕ ಅರಿವು ಮೂಡಿಸುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್ ಅವರು ಮಾತನಾಡಿ ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಮತ್ತು ತಡೆಗಟ್ಟುವ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಗುತ್ತಿದೆ. ಫ್ಲೋರೋಸಿಸ್ ಯುಕ್ತ ನೀರಿನ ಬಳಕೆಯಿಂದ ಹಲ್ಲು ಮತ್ತು ಮೂಳೆಗಳಿಗೆ ಹೆಚ್ಚಾಗಿ ತೊಂದರೆ ಉಂಟಾಗುತ್ತಿದ್ದು, ಸಾರ್ವಜನಿಕರು ಫ್ಲೋರೈಡ್ ಮುಕ್ತ ನೀರಿನ್ನು ಬಳಸುವಂತೆ ಸಲಹೆ ನೀಡಿದರು. ಜೊತೆಗೆ ಈ ಕಾರ್ಯಕ್ರಮದಡಿಯಲ್ಲಿ ದೊರೆಯುವ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಕೆ.ಎಸ್.ಆರ್.ಟಿ.ಸಿ ಆಡಳಿತಾಧಿಕಾರಿ ಗುರುಶಾಂತಪ್ಪ, ಜಿಲ್ಲಾ ಎಸ್.ಬಿ.ಬಿ. ಸಂಯೋಜಕರಾದ ಸುರೇಶ್‍ಬಾಬು, ಹೃದಯ ನಮನ ಮುಖ್ಯಸ್ಥರಾದ ಶಿವಕುಮಾರ್ ಮತ್ತು ತಂಡದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *