ಬೆಳೆ ನಷ್ಟ ಪರಿಹಾರ ರೈತರ ಖಾತೆಗೆ ವರ್ಗಾವಣೆ
ರಾಮನಗರ : 2021ರ ನವೆಂಬರ್ ಮಾಹೆಯಲ್ಲಿ ಜಿಲ್ಲೆಯಲ್ಲಿ ಬಿದ್ದ ಹೆಚ್ಚು ಮಳೆಯಿಂದಾಗಿ ಕೃಷಿ ಬೆಳೆಗಳಾದ ರಾಗಿ, ತೊಗರಿ, ಭತ್ತ , ಮುಸುಕಿನ ಜೋಳ ಮತ್ತು ಹುರುಳಿ ಬೆಳೆಗಳು 41644 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು ಸದರಿ ಬೆಳೆ ಹಾನಿಯ ಕುರಿತು ಕಂದಾಯ ಮತ್ತು ಕೃಷಿ ಇಲಾಖೆಯ ಜಂಟಿ ಸಮೀಕ್ಷೆ ಪೂರ್ಣಗೊಂಡಿರುತ್ತದೆ ಎಂದು ಜಂಟಿ ಕೃಷಿ ನಿರ್ದೆಶಕರು ತಿಳಿದ್ದಾರೆ.
ಈಗಾಗಲೇ ಪರಿಹಾರ ತಂತ್ರಾಂಶದಲ್ಲಿ 97563 ರೈತರ ವಿವರಗಳನ್ನು ಪರಿಹಾರ ಪೋರ್ಟಲ್‍ನಲ್ಲಿ ದಾಖಲಿಸಲಾಗಿದೆ. ಡಿಸೆಂಬರ್ 10ರ ವರೆಗೆ 30770 ರೈತರಿಗೆ 11.69 ಕೋಟಿ ರೂ ಪರಿಹಾರದ ಮೊತ್ತವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಒಂದು ವೇಳೆ ಬೆಳೆ ಹಾನಿಯ ಬಗ್ಗೆ ಜಂಟಿ ಸಮೀಕ್ಷೆ ಕೈಗೊಂಡು ಈ ವರೆಗೂ ಪರಿಹಾರ ಪೋರ್ಟಲ್‍ನಲ್ಲಿ ನೋಂದಾಯಿಸದೇ ಇರುವ ರೈತರು ತಕ್ಷಣವೇ ಬೆಳೆಯಾನಿಯಾಗಿರುವ ಬೆಳೆ ವಿವರ, ಆಧಾರ್ ಸಂಖ್ಯೆ, ಬ್ಯಾಂಕ್ ವಿವರಗಳನ್ನು ಹತ್ತಿರದ ಕಂದಾಯ ಇಲಾಖೆ ಅಥವಾ ಕೃಷಿ ಇಲಾಖೆಗೆ ಸಲ್ಲಿಸಿ ಪರಿಹಾರ ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.