ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ವಿರುದ್ಧದ ದೌರ್ಜನ್ಯ ತಡೆಗಟ್ಟಲು 14566 ಸಹಾಯವಾಣಿಗೆ ಕರೆ ಮಾಡಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ವಿರುದ್ಧದ ದೌರ್ಜನ್ಯ ತಡೆಗಟ್ಟಲು ಕೇಂದ್ರ ಸರ್ಕಾರ ರಾಷ್ಟ್ರೀಯ ಸಹಾಯವಾಣಿಯನ್ನು ಆರಂಭಿಸಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸರಿಯಾದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ಸಹಾಯವಾಣಿ ಪ್ರಾರಂಭಿಸಿದೆ.
ಇದನ್ನು ಎಸ್ಸಿ ಮತ್ತು ಎಸ್ಟಿಗಳ ಸಮುದಾಯದ ಮೇಲಿನ ದೌರ್ಜನ್ಯ ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ.
ಈ ಸೇವೆಯು ಕನ್ನಡ ಸೇರಿದಂತೆ ಹಿಂದಿ, ಇಂಗ್ಲಿಷ್ ಮತ್ತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರಾದೇಶಿಕ ಭಾಷೆಗಳಲ್ಲಿ 24ಘಿ7 ಲಭ್ಯವಿದೆ. ಶುಲ್ಕ ರಹಿತ ದೂರವಾಣಿ ಸಂಖ್ಯೆ 14566ಗೆ ಕರೆಮಾಡಿ.