ಜನವರಿಯಲ್ಲಿ ಜಿಲ್ಲೆಯಲ್ಲಿ ಕಾವೇರಿ ನದಿ ಉತ್ಸವ : ಡಾ. ಕೆ. ರಾಕೇಶ್ ಕುಮಾರ್

ರಾಮನಗರ : ಜಿಲ್ಲಾಡಳಿತ ಹಾಗೂ ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಜನವರಿ ಮಾಹೆಯಲ್ಲಿ ಕನಕಪುರದ ಅರ್ಕಾವತಿ ಮತ್ತು ಕಾವೇರಿ ನದಿ ಸಂಗಮದ ಹತ್ತಿರ ಕಾವೇರಿ ನದಿ ಉತ್ಸವವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉತ್ಸವ ಆಯೋಜನೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ನಿಯಮಗಳನ್ನು ಪಾಲನೆಯೊಂದಿಗೆ ಕಾರ್ಯಕ್ರಮ ನಡೆಯಬೇಕು. ಉತ್ಸವದಲ್ಲಿ ಸ್ವಚ್ಚತಾ ಕಾರ್ಯಕ್ರಮ, ಗಿಡ ನೆಡುವ ಕಾರ್ಯಕ್ರಮ, ಜನಪದ ಉತ್ಸವ, ಸಾಹಸ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ, ನೀರಾವರಿ ಯೋಜನೆಗಳ ಕಿರುಚಿತ್ರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜನೆ ಸಿದ್ಧಪಡಿಸಿಕೊಳ್ಳುವಂತೆ ತಿಳಿಸಿದರು. ವಿವಿಧ ಕಾರ್ಯಕ್ರಮಗಳ ಆಯೋಜನೆಯ ಹಿನ್ನಲೆಯಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಂದಿನ ಸಭೆಯನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಆಯೋಜಿಸುವಂತೆ ತಿಳಿಸಿದರು.

ವಿವಿಧ ಕಾರ್ಯಕ್ರಮಗಳ ಆಯೋಜನೆಯ ಹಿನ್ನಲೆಯಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಂದಿನ ಸಭೆಯನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಆಯೋಜಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರ ವಿಜಯ್ ಕುಮಾರ್, ಕಾರ್ಯಪಾಲಕ ಅಭಿಯಂತರ ವೆಂಕಟೇಗೌಡ, ಪರಿಸರ ಇಲಾಖೆ ಅಧಿಕಾರಿ ವಾಸು, ಚನ್ನಪಟ್ಟಣ ತಹಶೀಲ್ದಾರ್ ನಾಗೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *