ಪಿಎಫ್ಐ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ರಾಮನಗರ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪಟ್ಟಣದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಹಾಗೂ ಮುಖಂಡರ ಮೇಲೆ ವಿನಾಕಾರಣ ಲಾಠಿಚಾರ್ಜ್ ಮಾಡಿರುವ ಪೊಲೀಸರನ್ನು ಕೂಡಲೇ ವಜಾಗೊಳಿಸಿ ಬಂಧಿಸಬೇಕು ಎಂದು ಒತ್ತಾಯಿಸಿ ರಾಮನಗರ ಜಿಲ್ಲಾ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಎಸ್ ಡಿಪಿಐ ಕಾರ್ಯಕರ್ತರು ನಗರದ ತಾಲ್ಲೂಕು ಆಡಳಿತ ಸೌಧದ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಎಸ್ ಡಿಪಿಐ ಕಾನೂನು ಸಲಹೆಗಾರ, ವಕೀಲ ಚಾನ್ ಪಾಷ ಮಾತನಾಡಿ, ಉಪ್ಪಿನಂಗಡಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಯಾವುದೇ ಮುನ್ಸೂಚನೆ ನೀಡದೆ, ಅಲ್ಲಿನ ಪೊಲೀಸರು ಬರ್ಬರವಾಗಿ ಲಾಠಿಚಾರ್ಜ್ ನಡೆಸಿರುವುದು ಖಂಡನೀಯವಾಗಿದ್ದು, ತಪ್ಪಿತಸ್ಥ ಪೊಲೀಸರ ವಿರುದ್ಧ ಈ ಕೂಡಲೇ ಪೊಲೀಸ್ ಇಲಾಖೆಯ ವರಿಷ್ಠಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಭಾರತೀಯರಿಂದ ಸ್ಥಾಪನೆಯಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಎಸ್ ಡಿಪಿಐ ಸಂಘಟನೆಗಳು ಯಾವಾಗಲೂ ನಮ್ಮ ನೆಲದ ಕಾನೂನನ್ನು ಉಲ್ಲಂಘನೆ ಮಾಡಿಲ್ಲ.
ಮಾತ್ರವಲ್ಲ, ಭಾರತದ ಸಂವಿಧಾನ ಹಾಗೂ ಕಾನೂನನ್ನು ಅತ್ಯಂತ ಗೌರವದಿಂದ ಪಾಲಿಸುತ್ತವೆ. ಆದರೆ,
ಕಾರ್ಯಕರ್ತರು ಹಾಗೂ
ರಾತೋರಾತ್ರಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಮೂರು ಮಂದಿಯನ್ನು ಅಕ್ರಮವಾಗಿ ಬಂಧಿಸಿದ್ದರು. ಆದರೆ ಬಂಧನದ ವೇಳೆ ಯಾವುದೇ ಸೂಚನೆಯನ್ನು ನೀಡಿರಲಿಲ್ಲ ಮತ್ತು ಯಾವ ಕಾರಣಕ್ಕಾಗಿ ಬಂಧಿಸಲಾಗುತ್ತಿದೆ ಎಂಬ ಮಾಹಿತಿಯನ್ನೂ ನೀಡಿರಲಿಲ್ಲ. ಅಕ್ರಮ ಬಂಧನವನ್ನು ಖಂಡಿಸಿ ಪ್ರತಿಭಟನಕಾರರು ಬೆಳಗ್ಗೆ ಭಾಗ ಮುಂದೆ ಜಮಾಯಿಸಿದಾಗಲಷ್ಟೇ ಸ್ಥಳೀಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕರೆ ತಂದಿದ್ದೇವೆಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಆದರೆ, ಅವರನ್ನು ವಶಕ್ಕೆ ಪಡೆಮ ವಿಚಾರಣೆ ನಡೆಸಲು ಪೊಲೀಸರಲ್ಲಿ ಎಳ್ಳಷ್ಟೂ ಆಧಾರವಿರಲಿಲ್ಲ, ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದರು.
ಪ್ರತಿಭಟನೆ ನಂತರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಎಸ್ ಡಿಪಿಐ ಕಾರ್ಯಕರ್ತರು ತಹಸೀಲ್ದಾರ್ ಅವರಿಗೆ ತಮ್ಮ ಮನವಿಯನ್ನು ಅರ್ಪಿಸಿದರು.
ಪಿಎಫ್ಐ ತಾಲ್ಲೂಕು ಅಧ್ಯಕ್ಷ ಹುಮಾಯುನ್ ಷರೀಫ್, ಎಸ್ ಡಿ ಪಿ ಐ ತಾಲ್ಲೂಕು ಅಧ್ಯಕ್ಷ ಸೈಯದ್ ಅಸಾದುಲ್ಲಾ, ಪಿಎಫ್ಐ ಮುಖಂಡರಾದ ಮುನಾಫ್, ಅಮ್ಜದ್, ಶಕೀಲ್, ಬಕಾಷ್, ಆರೀಫ್ ಹಾಗೂ ಇನ್ನೂ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *