ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜನುಮ ದಿನಾಚರಣೆ : ಸರ್ಕಾರಿ ಬಸ್ ನಿಲ್ದಾಣದಲ್ಲಿ ಸಿಹಿ ವಿತರಣೆ

ರಾಮನಗರ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಜೆಡಿಎಸ್ ಪ್ರಚಾರ ಸಮಿತಿ ಮಾಜಿ ಅಧ್ಯಕ್ಷ ಹೋಟೆಲ್ ಉಮೇಶ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಗುರುವಾರ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಆಚರಿಸಲಾಯಿತು.
ಈ ವೇಳೆ ಜೆಡಿಎಸ್ ಪ್ರಚಾರ ಸಮಿತಿ ಮಾಜಿ ಅಧ್ಯಕ್ಷ ಹೋಟೆಲ್ ಉಮೇಶ್ ಮಾತನಾಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಮನವಿ ಮೇರೆಗೆ ಈ ವರ್ಷ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಕರೋನಾ, ನೆರೆ ಹಾವಳಿಯಂತಹ ಸಂಕಷ್ಟ ಸಮಯದಲ್ಲಿ ಅದ್ದೂರಿ ಆಚರಣೆ ಮಾಡದೇ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ
ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ಈ ಮೂಲಕ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು ಎಂದು ಹೇಳಿದರು.
ಈ ವೇಳೆ ಚನ್ನಪಟ್ಟಣ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಭಿನಂದನ್ ಗೌಡ, ಮಾಜಿ ಗ್ರಾಮ ಪಂಚಾಯತಿ ಸದಸ್ಯ ಎಸ್. ಆರ್. ರಾಮಕೃಷ್ಣಯ್ಯ, ಮುಖಂಡರಾದ ಪ್ರಸನ್ನ ಕುಮಾರ್, ನಾಗರಾಜು, ಚಂದ್ರು, ಮಹಾಲಿಂಗಯ್ಯ, ಸೇರಿದಂತೆ ಹಲವರು ಹಾಜರಿದ್ದರು. ಬಸ್ ನಿಲ್ದಾಣದಲ್ಲಿದ್ದ ಐನೂರು ಮಂದಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.

Leave a Reply

Your email address will not be published. Required fields are marked *