ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಕೆ.ಕೃಷ್ಣ ಗೆಲುವು ನಿಶ್ಚಿತ: ಗಾಣಕಲ್ ನಟರಾಜ್

ರಾಮನಗರ: ಬನ್ನಿಕುಪ್ಪೆ (ಬಿ) ಗ್ರಾಮ ಪಂಚಾಯತಿಯ ಮುತ್ತುರಾಯನಗುಡಿ ಪಾಳ್ಯ ವಾರ್ಡ್ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಕೆ.ಕೃಷ್ಣ ಅವರು ಅತ್ಯಧಿಕ ಮತಗಳಿಂದ ಆಯ್ಕೆಯಾಗಲಿದ್ದಾರೆ ಎಂದು ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ, ಬಿಡದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಾಣಕಲ್ ನಟರಾಜ್ ವಿಶ್ವಾಸ ವ್ಯಕ್ತಪಡಿಸಿದರು.
ತಾಲ್ಲೂಕಿನ ಬಿಡದಿ ಹೋಬಳಿ ಬನ್ನಿಕುಪ್ಪೆ (ಬಿ) ಗ್ರಾಮ ಪಂಚಾಯತಿಯ ಮುತ್ತುರಾಯನಗುಡಿ ಪಾಳ್ಯ ವಾರ್ಡ್ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಎಂ.ಕೆ.ಕೃಷ್ಣ ಅವರಿಗೆ ಸಾಥ್ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬನ್ನಿಕುಪ್ಪೆ ಗ್ರಾಮ ಪಂಚಾಯತಿ ಯಲ್ಲಿ ಈಗಾಗಲೇ ಆಯ್ಕೆಯಾಗಿರುವ ಕಾಂಗ್ರೆಸ್ ಬೆಂಬಲಿತ ಸದಸ್ಯರು ಉತ್ತಮ ಕೆಲಸಗಳನ್ನು ಮಾಡುತ್ತಿರುವುದು ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಸುರೇಶ್, ವಿಧಾನ ಪರಿಷತ್ ಸದಸ್ಯ, ಹಿರಿಯ ಮುತ್ಸದ್ಧಿ ಸಿ.ಎಂ.ಲಿಂಗಪ್ಪ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಬಿಡದಿ ಹೋಬಳಿಯು ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದ್ದು, ಅದೇ ರೀತಿ ಬನ್ನಿಕುಪ್ಪೆ ಗ್ರಾಮ ಪಂಚಾಯತಿಯು ಅಭಿವೃದ್ಧಿ ಹೊಂದಲು ಎಂ.ಕೆ.ಕೃಷ್ಣ ಅವರನ್ನು ಪ್ರಜ್ಞಾವಂತ ಮತದಾರರು ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.
ಮುತ್ತುರಾಯನಗುಡಿ ಪಾಳ್ಯ ವಾರ್ಡ್ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಕೆ.ಕೃಷ್ಣ ಅವರು ಮಾತನಾಡಿ,
ಮುತ್ತುರಾಯನಗುಡಿ ಪಾಳ್ಯ ವಾರ್ಡ್ ಸರ್ವತೋಮುಖ ಅಭಿವೃದ್ಧಿಗೆ ತಾವು ಅನೇಕ ಸಿದ್ಧತೆಯೊಂದಿಗೆ ಬದ್ಧತೆ ಉಳ್ಳವನಾಗಿದ್ದು, ಮತದಾರ ಪ್ರಭು ತಮ್ಮನ್ನು ಗೆಲ್ಲಿಸಬೇಕು ಎಂದು ಕೋರಿದರು.
ಗ್ರಾಪಂ ಸದಸ್ಯ ಉದಯ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು, ಕಾಂಗ್ರೆಸ್ ಸ್ಥಳೀಯ ಮುಖಂಡರಾದ ಗೋಪಾಲರಾಜು, ರಮೇಶ್, ಮಹೇಶ್, ಹೊಂಬೇಗೌಡ, ರೇವಣಸಿದ್ದಯ್ಯ, ತಮ್ಮಯ್ಯಣ್ಣ ಸೇರಿದಂತೆ ಅನೇಕ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *