ಕಾನೂನು ಸಹಾಯಕ ಪ್ರಾಧ್ಯಾಪಕ ಎಚ್.ಎಂ. ಸುಮಂತ್ ಅವರಿಗೆ ಪಿಎಚ್.ಡಿ ಪದವಿ
ರಾಮನಗರ : ಇಲ್ಲಿನ ಬಸವನಪುರದ ಬಳಿ ಇರುವ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನೂನು ಸಹಾಯಕ ಪ್ರಾಧ್ಯಾಪಕ ಎಚ್.ಎಂ. ಸುಮಂತ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ.
ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ನಿಖಾಯದಲ್ಲಿ ಕಾನೂನು ಸಹ ಪ್ರಾಧ್ಯಾಪಕರಾದ ಡಾ. ಜ್ಯೋತಿ ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ‘A Critical study of the Law relating to combating International Terrorism in India’ ಎಂಬ ಕಾನೂನು ವಿಷಯದಲ್ಲಿ ಪ್ರಬಂಧ ಮಂಡಿಸಿ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದಾರೆ.
ಎಚ್.ಎಂ. ಸುಮಂತ್ ಅವರು ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದವರು.