ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಾಮನಗರ : ರಾಮನಗರ ಜಿಲ್ಲೆಯ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ಸರ್ಕಾರಿ ಬಾಲಕಿಯರ ಬಾಲಮಂದಿರವು ಲಾಳಘಟ್ಟ, ಚನ್ನಪಟ್ಟಣ ತಾಲ್ಲೂಕು, ರಾಮನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಸಂಸ್ಥೆಯ 6 ರಿಂದ 18 ವರ್ಷಗಳ ವಯೋಮಿತಿಯ ಹೆಣ್ಣು ಮಕ್ಕಳಿದ್ದು, ಈ ಮಕ್ಕಳಿಗೆ ಇಂಗ್ಲೀಷ್, ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಅರೇಕಾಲಿಕ ದೈಹಿಕ, ಯೋಗ, ಸಂಗೀತ, ಕ್ರಾಪ್ಟ್ ಸಂಬಂಧಿಸಿದ ಶಿಕ್ಷಕರು-1, ಮತ್ತು ಪಾಠ ಹೇಳುವ ಶಿಕ್ಷಕರು-1 (ಎಜುಕೇಟರ್ ಬಿ.ಹೆಡ್/ಡಿ.ಹೆಡ್) ಇವರ ಸೇವೆಗೆ ರೂ. 4,000 ಗಳಂತೆ ಗೌರವಧನ ನೀಡುತ್ತಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಆಹ್ವಾನಿಸಲಾಗಿದ್ದು, ಪ್ರತಿ ದಿನ 2 ಘಂಟೆಗಳ ಕಾಲ ಬೋಧನೆ ಮಾಡುವಂತೆ ತಿಳಿಸಲಾಗಿದ್ದು, ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಸಲ್ಲಿಸುವಂತೆ ತಿಳಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 27 ಕೊನೆಯ ದಿನಾಂಕ ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಗಳ ಸಂಕೀರ್ಣ, ಕೊಠಡಿ ಸಂಖ್ಯೆ:307, 2ನೇ ಮಹಡಿ, ರಾಮನಗರ ಜಿಲ್ಲೆ, ರಾಮನಗರ. ದೂರವಾಣಿ ಸಂಖ್ಯೆ: 080-29655500 ಅಥವಾ ಅಧೀಕ್ಷಕರ ದೂ.ಸಂ:7829930339 ಯನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *