ಮಧ್ಯವ್ಯರ್ಜನ ಶಿಬಿರದ ಪೂರ್ವಭಾವಿ ಸಭೆ
ರಾಮನಗರ ತಾಲೂಕಿನ ಬಿಡದಿಯ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ನಡೆಯುವ ಬಿಡದಿ ವಲಯದ ಮಧ್ಯವ್ಯರ್ಜನ ಶಿಬಿರದ ಪೂರ್ವಭಾವಿ ಸಭೆ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಚಿಕ್ಕಣ್ಣಯ್ಯ ನೇತೃತ್ವದಲ್ಲಿ ನಡೆಯಿತು. ಜಿಲ್ಲಾ ನಿರ್ದೇಶಕ ಪಿ.ಶ್ರೀನಿವಾಸ್, ಮೈಸೂರು ಪ್ರಾದೇಶಿಕ ಯೋಜನಾಧಿಕಾರಿ ಭಾಸ್ಕರ್, ರಾಮನಗರ ತಾಲೂಕು ಯೋಜನಾಧಿಕಾರಿ ಸೂರ್ಯನಾರಾಯಣ್ ಸೇರಿದಂತೆ ಹಾಲು ಉತ್ಪಾದಕರ ಸಂಘಗಳ ಕಾರ್ಯದರ್ಶಿಗಳು, ಮೆಡಿಕಲ್ ಸಂಘದ ಸದಸ್ಯರುಗಳು ಸಂಘ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.