ಬಿಡದಿ ಪುರಸಭೆ ಚುನಾವಣೆಯ ಫಲಿತಾಂಶ ರಾಜ್ಯ ರಾಜಕಾರಣದ ದಿಕ್ಕು ಬದಲಿಸಲಿದೆ : ಕುಮಾರಸ್ವಾಮಿ

ರಾಮನಗರ : ಇಂದು ಬಿಡದಿ ಪಟ್ಟಣ ವೇಗವಾಗಿ ಬೆಳೆಯುತ್ತಿದ್ದು ಮುಂದಿನ ದಿನಗಳಲ್ಲಿ ತಾಲ್ಲೂಕು ಕೇಂದ್ರವನ್ನಾಗಿ ಮಾಡಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಬಿಡದಿ ಪುರಸಭೆ ಚುನಾವಣೆಯ ಫಲಿತಾಂಶ ಇಂದು ಇಡಿ ರಾಜ್ಯದ ರಾಜಕಾರಣದ ದಿಕ್ಕುಬದಲಿಸಲಿದೆ ಎಂದು ಮಾಜಿಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಬಿಡದಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಬಹಿರಂಗ ಪ್ರಚಾರ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಜನ ಸೊಪ್ಪು ಹಾಕುವುದಿಲ್ಲ. ನಾನು ಏನು ಅಭಿವೃದ್ಧಿ ಮಾಡಿದ್ದೇನೆ ಎಂಬುದು ಜನತೆಯ ಕಣ್ಮುಂದೆ ಇದೆ. ಅದನ್ನು ನೋಡಿ ಜನ ಜೆಡಿಎಸ್ ಪಕ್ಷಕ್ಕೆ ಮತ ನೀಡಬೇಕೆಂದು ಮನವಿ ಮಾಡಿದರು.
ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿರುವವರಿಗೆ ರಾಜ್ಯದ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

ಶಾಸಕ ಎ.ಮಂಜುನಾಥ್ ಮಾತನಾಡಿ ಮಾಜಿ ಶಾಸಕ ಬಾಲಕೃಷ್ಣ ಅವರು ಮತದಾರರ ದಿಕ್ಕು ತಪ್ಪಿಸಲು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇದು ಪ್ರಭಾವ ಬೀರುವುದಿಲ್ಲ. ಕುಮಾರಸ್ವಾಮಿ ಸಿಎಂ ಅಗಿದ್ದಾಗ ಬಿಡದಿ ಮತ್ತು ಮಾಗಡಿ ಕ್ಷೇತ್ರದ ಅಭಿವೃದ್ಧಿಗೆ 350 ಕೋಟಿ ರೂಗಳ ಅನುದಾನ ನೀಡಿದ್ದಾರೆ. ಇದೀಗ ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ದಿ ಕೆಲಸಗಳು ವೇಗವಾಗಿ ನಡೆಯುತ್ತಿದ್ದು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಮತ್ತಷ್ಟು ಕೆಲಸ ಮಾಡಲು ಉತ್ಸಾಹ ನೀಡಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *