ಯಾವುದೇ ಲೋಪವಿಲ್ಲದೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯನಿರ್ವಹಿಸಿ : ತುಷಾರ ಗಿರಿನಾಥ್
ರಾಮನಗರ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ 2022 ರ ಸಂಬಂಧ ನಡೆಸಲಾಗುತ್ತಿರುವ ಕೆಲಸಗಳು ಯಾವುದೇ ಲೋಪವಿಲ್ಲದೆ ನಡಯಬೇಕು ಎಂದು ಮತದಾರರ ಪಟ್ಟಿ ವೀಕ್ಷಕರು ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಿರುವ ಬಗ್ಗೆ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸಂಬಂಧಿಸಿದಂತೆ ಡಿಸೆಂಬರ್ 8ರವರೆಗೆ 7717 ಅರ್ಜಿ ವಿಲೇಯಾಗಿರುತ್ತದೆ. ಹೆಸರು ಸೇರ್ಪಡೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಹಂತದಲ್ಲಿ ಅರ್ಜಿ ವಿಲೇವಾರಿಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ 2022 ರ ಸವiಯವಕಾಶ ಮುಗಿದಿದ್ದಲ್ಲಿ, ಕಾರಣ ನೀಡಿ ಮುಂದಿನ ದಿನಗಳಲ್ಲಿ ಅವುಗಳನ್ನು ಸೇರ್ಪಡೆ ಮಾಡುವಂತೆ ತಿಳಿಸಿದರು.
ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಫಾರಂ 7 ಡಿಸೆಂಬರ್ 8 ರವರೆಗೆ 10616 ಅರ್ಜಿ ವಿಲೇವಾರಿ ಮಾಡಿರುವ ವಿವರ ಪಡೆದ ವೀಕ್ಷಕರು, ಮೃತ ಹೊಂದಿರುವ ವ್ಯಕ್ತಿಗಳ ಹೆಸರು ಕೈಬಿಡುವಾಗ ಕಚೇರಿಗಳಲ್ಲಿರುವ ಮರಣ ಹೊಂದಿರುವವರ ಹೆಸರನ್ನು ರಿಜಿಷ್ಟರ್‍ನಲ್ಲಿ ನಮೂದಿಸಿ ವಿಲೇವಾರಿ ಮಾಡಿರುವುದನ್ನು ಖಾತ್ರಿ ಮಾಡಿಕೊಳ್ಳಿ ಎಂದು ತಿಳಿಸಿದರು,
ಸಭೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಕೆ, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ತಹಶೀಲ್ದಾರ್ ವಿಜಯ್ ಕುಮಾರ್, ನಾಗೇಶ್, ವಿಶ್ವನಾಥ್, ಶ್ರೀನಿವಾಸ್ ಪ್ರಸಾದ್, ರಾಮನಗರ ನಗರಸಭೆ ಆಯುಕ್ತ ನಂದ ಕುಮಾರ್, ಕನಕಪುರ ನಗರ ಸಭೆ ಆಯುಕ್ತೆ ಶುಭ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.