ರಾಜ್ಯದಲ್ಲಿ ಡಿ. 28ರಿಂದ ಹತ್ತು ದಿನಗಳ ಕಾಲ ರಾತ್ರಿ ಕಫ್ರ್ಯೂ ಜಾರಿ

ಬೆಂಗಳೂರು (hairamanagara.in) : ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಸೋಂಕು ತಡೆಗೆ ತೆಗೆದುಕೊಂಡಿರುವ ಕ್ರಮಗಳು ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉನ್ನತಮಟ್ಟದ ಸಭೆ ನಡೆಸಿದರು.
ಡಿಸೆಂಬರ್ 28ರಿಂದ ಹತ್ತು ದಿನಗಳು ರಾತ್ರಿ ಕಫ್ರ್ಯೂ ಜಾರಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ರ ವರೆಗೂ ಕಫ್ರ್ಯೂ ಇರಲಿದೆ. ರೆಸ್ಟೊರೆಂಟ್, ಬಾರ್, ಕ್ಲಬ್ ಹಾಗೂ ಪಬ್ಗಳಲ್ಲಿ ಒಟ್ಟು ಆಸನಗಳ ಪೈಕಿ ಶೇಕಡ 50 ಜನರ ಪ್ರವೇಶದ ಮಿತಿ ವಿಧಿಸಲಾಗಿದೆ.
ಹೊಸ ವರ್ಷಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ನಡೆಸುವ ಸಂಭ್ರಮಾಚರಣೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *