ಬಿಡದಿ ಪುರಸಭೆ ಚುನಾವಣೆ : ಗಾಣಕಲ್ ನಟರಾಜು ಕೃತಜ್ಞತೆ
ರಾಮನಗರ : ತಾಲ್ಲೂಕಿನ ಬಿಡದಿ ಪುರಸಭೆ ಚುನಾವಣೆಯು ಶಾಂತಿಯುತವಾಗಿ ನಡೆಯಲು ಕಾರಣಕರ್ತರಾದ ಎಲ್ಲರಿಗೂ ಬಿಡದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಾಣಕಲ್ ನಟರಾಜು ಅವರು ಕೃತಜ್ಞತೆ ಅರ್ಪಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಡದಿ ಪುರಸಭೆಯ 23 ವಾರ್ಡ್ ಗಳಿಗೆ ಸೋಮವಾರ ನಡೆದ ಮತದಾನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತೀವ್ರ ಎಚ್ಚರಿಕೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಇಲಾಖೆ ಸೇರಿದಂತೆ, ಯಾವುದೇ ರಾಜಕೀಯ ರಾಗ-ದ್ವೇಷಗಳಿಗೆ ಒಳಗಾಗದೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಮುಖಂಡರು, ಮುಖ್ಯವಾಗಿ ಕಾರ್ಯಕರ್ತರು ಹಾಗೂ ಶಾಂತಿಯುತ ಚುನಾವಣೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣರಾದ ಎಲ್ಲರನ್ನೂ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ ಎಂದು ಗಾಣಕಲ್ ನಟರಾಜು ಅವರು ತಿಳಿಸಿದ್ದಾರೆ.