ಬಿಡದಿ ಪುರಸಭೆ ಫಲಿತಾಂಶ : ಜೆಡಿಎಸ್ 14, ಕಾಂಗ್ರೆಸ್ ಗೆ 9 ಸ್ಥಾನ

ರಾಮನಗರ : ತೀವ್ರ ಕುತೂಹಲ ಕೆರಳಿಸಿದ್ದ ಬಿಡದಿ ಪುರಸಭೆಯ ಚುನಾವಣಾ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ಬಿಡದಿಯ ಕೇತಿಗಾನಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಟ್ರಾಂಗ್ ರೂಂ ನಲ್ಲಿ ನಡೆದ ಮತ ಎಣಿಕೆಯಲ್ಲಿ ಜೆಡಿಎಸ್ 14 ಸ್ಥಾನಗಳನ್ನು, ಕಾಂಗ್ರೆಸ್ 9 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಡದಿ ಪುರಸಭೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಮುಂಬರುವ ಮಾಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆ ದೃಷ್ಟಿಯಿಂದ ಬಿಡದಿ ಪುರಸಭೆ ಚುನಾವಣೆ ಮಹತ್ವ ಪಡೆದುಕೊಂಡಿತ್ತು. ಬಿಡದಿ ಪುರಸಭೆಯ 23 ವಾರ್ಡ್‍ಗಳಿಗೆ ಚುನಾವಣೆಯಲ್ಲಿ ಶೇ 82.71ರಷ್ಟು ಮತದಾನ ನಡೆದಿತ್ತು.

Leave a Reply

Your email address will not be published. Required fields are marked *