ರಾಮನಗರ ಜಿಲ್ಲೆಯಲ್ಲಿ ಜ.2 ರವರೆಗೆ ಪ್ರವಾಸಿ ಸ್ಥಳಗಳಿಗೆ ನಿರ್ಬಂಧ
ರಾಮನಗರ : ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕೊರೊನಾ ಮೂರನೇ ಅಲೆ ಓಮಿಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ರಾಮನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷದ ಸಂಭ್ರಮಾಚರಣೆ ಗುಂಗಿನಲ್ಲಿ ಮೈಮರೆತರೆ ಕೋವಿಡ್ ಮೂರನೇ ಅಲೆ, ರೂಪಾಂತರ ಓಮಿಕ್ರಾನ್ ವೈರಸ್ ಹರಡುವ ಭೀತಿಯನ್ನು ಮನಗಂಡ ರಾಮನಗರ ಜಿಲ್ಲಾಡಳಿತ, ಡಿ.31ರಿಂದ ಜ. 2 ರವರೆಗೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ರಾಮನಗರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಾದ ರಾಮನಗರ ತಾಲ್ಲೂಕಿನ ರೇವಣಸಿದ್ದೇಶ್ವರ ಬೆಟ್ಟ, ರಾಮದೇವರ ಬೆಟ್ಟ, ಚನ್ನಪಟ್ಟಣ ತಾಲ್ಲೂಕಿನ ಕಣ್ವ ಜಲಾಶಯ, ಮಾಗಡಿ ತಾಲ್ಲೂಕಿನ ಸಾವನದುರ್ಗ, ಮಂಚನಬೆಲೆ ಜಲಾಶಯ ಮತ್ತು ಕನಕಪುರ ತಾಲ್ಲೂಕಿನ ಸಂಗಮ, ಮೇಕೆದಾಟು ಹಾಗೂ ಚುಂಚಿಪಾಲ್ಸ್ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶ್ರೀ ರಾಮದೇವರ ಬೆಟ್ಟ, ಶ್ರೀ ರೇವಣ ಸಿದ್ದೇಶ್ವರ ಬೆಟ್ಟ, ಚನ್ನಪಟ್ಟಣದ ಕಣ್ವ ಜಲಾಶಯ, ಮಾಗಡಿಯ ಮಂಚನಬೆಲೆ ಜಲಾಶಯ, ಸಾವನದುರ್ಗ. ಕನಕಪುರ ತಾಲೂಕಿನ ಸಂಗಮ, ಮೇಕೆದಾಟು, ಚುಂಚಿ ಜಲಪಾತ ಪ್ರವಾಸಿತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದು, ರಾಮನಗರ ಜಿಲ್ಲೆಯಾದ್ಯಂತೆ ಕೋವಿಡ್- 19 ರ 3 ನೇ ಅಲೆ ವ್ಯಾಪಕವಾಗಿ ಹರಡುವ ಸಾಧ್ಯತೆ ಇರುತ್ತದೆ.
ಈ ಹಿನ್ನಲೆಯಲ್ಲಿ ಸದರಿ ಪ್ರವಾಸಿ ಸ್ಥಳಗಳಲ್ಲಿ ನಿರ್ಬಂಧಿತ ನಿಷೇದಾಜ್ಞೆಯನ್ನು ಜಾರಿ ಗೊಳಿಸಿ ಆದೇಶ ಹೊರಡಿಸಲಾಗಿದೆ.