ನಂದಿನಿ ಹಾಲಿನ ಪ್ಯಾಕೆಟ್ ಗಳ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನು ನಾವು ಮುದ್ರಿಸಿಲ್ಲ : ಕೆಎಂಎಫ್ ಅಧಿಕಾರಿಗಳು

ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ನಂದಿನಿ ಹಾಲಿನ ಪ್ಯಾಕೆಟ್ ಗಳ ಮೇಲೆ ಮುದ್ರಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿಲ್ಲ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಈಚೆಗೆ ನಿಧನರಾದ ಪ್ರಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ವಿಶೇಷ ಗೌರವ ಸಲ್ಲಿಸಿದೆ. ತನ್ನ ನಂದಿನಿ ಹಾಲಿನ ಪ್ಯಾಕೆಟ್ ಗಳ ಮೇಲೆ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ಕೆಂಎಂಎಫ್ ಮುದ್ರಣ ಮಾಡಿದೆ ಎಂಬ ಪೋಟೊಗಳು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಆದರೆ ಪುನೀತ್ ರಾಜ್‍ಕುಮಾರ್ ಭಾವಚಿತ್ರವಿರುವ ನಂದಿನಿ ಹಾಲಿನಿ ಪ್ಯಾಕೆಟ್ ಗಳ ಬಗ್ಗೆ ನಮಗೆ ತಿಳಿದಿಲ್ಲ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *