ಏಳನೇ ವೇತನ ಆಯೋಗ ರಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆ. ಸತೀಶ್ ಮನವಿ

ರಾಮನಗರ : ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ರಚಿಸಿ, ವೇತನ ಪರಿಷ್ಕರಿಸಿ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಸತೀಶ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ಸಂಸದರಾದ ಡಿ.ಕೆ. ಸುರೇಶ್ ಅವರಿಗೆ ಮನವಿ

ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು, ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‍ಪಿಎಸ್) ರದ್ದುಪಡಿಸಿ, ನಿಶ್ಚಿತ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಅವರಿಗೆ ಮನವಿ

ರಾಜ್ಯದಲ್ಲಿ ಖಾಲಿ ಇರುವ 2.63 ಲಕ್ಷ ನೌಕರರ ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿ ಮಾಡಬೇಕು. ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು, ಉಪನ್ಯಾಸಕರ ವರ್ಗಾವಣೆ ಕಾಯ್ದೆ ಜಾರಿ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಪದವೀಧರ ಶಿಕ್ಷಕರು, ಮುಖ್ಯ ಶಿಕ್ಷಕರ ಸಮಸ್ಯೆ, ವೇತನ ತಾರತಮ್ಯ ಹಾಗೂ ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯರಾದ ಅ. ದೇವೇಗೌಡ ಅವರಿಗೆ ಮನವಿ

ಇದೇ ಸಂದರ್ಭದಲ್ಲಿ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ. ದೇವೇಗೌಡ ಅವರಿಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ. ಸತೀಶ್, ಪ್ರಧಾನ ಕಾರ್ಯದರ್ಶಿ ಕೃಷ್ಣೇಗೌಡ, ಖಜಾಂಚಿ ನರಸಯ್ಯ ಅವರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *