ಜ.6 ರಂದು ಡಿ.ಟಿ. ರಾಮು ಅವರ 25ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ
ಚನ್ನಪಟ್ಟಣ : ಚನ್ನಪಟ್ಟಣದ ಮಾಜಿ ಶಾಸಕ ದಿವಂಗತ ಡಿ.ಟಿ. ರಾಮು ಅವರ 25ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಡಿ.ಟಿ. ರಾಮು ಸ್ಮಾರಕ ಪ್ರತಿಷ್ಠಾನದ ವತಿಯಿಂದ ಪಟ್ಟಣದ ಶತಮಾನೋತ್ಸವ ಭವನದಲ್ಲಿ ಜ. 6ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದು, ಮಾಜಿಮುಖ್ಯಮಂತ್ರಿ, ಶಾಸಕ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿ.ಟಿ. ರಾಮು ಅವರನ್ನು ಕುರಿತು ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯ ಎಚ್.ಎಂ. ರೇವಣ್ಣ, ಮಾಜಿ ಸಚಿವ ಆತ್ಮಾನಂದ, ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಪಾಲ್ಗೊಳ್ಳಲಿದ್ದಾರೆ.
ಡಿ.ಟಿ. ರಾಮು ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷ ಸು.ತ. ರಾಮೇಗೌಡ ಪ್ರಾಸ್ತಾವಿಕ ನುಡಿಯನ್ನಾಡಲಿದ್ದು, ಸಾಹಿತಿ ಡಾ. ಕೂಡ್ಲೂರು ವೆಂಕಟಪ್ಪ ನಿರೂಪಣೆ ಮಾಡಲಿದ್ದಾರೆ. ಡಿ.ಟಿ. ರಾಮು ಸ್ಮಾರಕ ಪ್ರತಿಷ್ಠಾನದ ನಿರ್ದೇಶಕ ಡಾ. ಭಗತ್ ರಾಮ್ ಸ್ವಾಗತ ಕೋರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
