ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹ

ರಾಮನಗರ : ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಎದುರು ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಿಗೆ ಬುಧವಾರ ಮನವಿ ಸಲ್ಲಿಸಿದರು.

ರಾಮನಗರ ಜಿಲ್ಲೆಯಲ್ಲಿರುವ 9 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕಳೆದ 24 ದಿನಗಳಿಂದ ಪೂರ್ಣ ಪ್ರಮಾಣದ ತರಗತಿಗಳು ನಡೆಯುತ್ತಿಲ್ಲ, ಅತಿಥಿ ಉಪನ್ಯಾಸಕರ ತರಗತಿ ಬಹಿಷ್ಕಾರದಿಂದ ತರಗತಿಗಳು ನಡೆಯುತ್ತಿಲ್ಲ, ರಾಮನಗರ ಜಿಲ್ಲೆಯ 09 ಸರ್ಕಾರಿ ಪ್ರಥಮ ದರ್ಜೆ ಕಾಲೇಗಳಲ್ಲಿ ಸುಮಾರು 9 ಸಾವಿರಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿದ್ದು, ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ತೊಂದರೆ ಉಂಟಾಗಿದೆ, ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಿನ್ನಡೆಯಾಗಿದ್ದು, ರಾಮನಗರ ಜಿಲ್ಲೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರು 180, ಅತಿಥಿ ಉಪನ್ಯಾಸಕರು 450 ಕ್ಕಿಂತ ಹೆಚ್ಚಿಗೆ ಇದ್ದು, ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸಬೇಕು ಎಂದು ಆಗ್ರಹಿಸಿದರು.

ಕೋವಿಡ್‍ನಿಂದ ಇಡೀ ರಾಜ್ಯವೇ ತತ್ತರಿಸಿ ಹೋಗಿದ್ದು ಬಳಿಕ ಹಂತ-ಹಂತವಾಗಿ ಸಹಜ ಸ್ಥಿತಿಗೆ ಮರಳಿದೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಪದವಿ ಹಾಗು ಸ್ನಾತ್ತಕೋತ್ತರ ತರಗತಿಗಳು ಆರಂಭವಾಗಿವೆ, ವಿದ್ಯಾರ್ಥಿಗಳು ಉತ್ಸಾಹದಿಂದ ತರಗತಿಗೆ ಹಾಜರಾಗುತ್ತಿದ್ದಾರೆ. ಆದರೆ ಡಿಸೆಂಬರ್ 10ರಿ ಂದ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸುತ್ತಿರುವುದರಿಂದ ಪೂರ್ಣ ಪ್ರಮಾಣದ ತರಗತಿಗಳು ನಡೆಯುತ್ತಿಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳು ಸಿ-1 ಪರೀಕ್ಷೆಗಳು ನಡೆಯಲಿವೆ. ಈಗಾಗಿ ಸರ್ಕಾರವು ಆದಷ್ಟು ಬೇಗ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಸೂಚಿಸಬೇಕೆಂದು ವಿದ್ಯಾರ್ಥಿಗಳ ಪರವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದು ತಿಳಿಸಿದರು.
ಬೇಡಿಕೆಗಳು : ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸಬೇಕು. ಪೂರ್ಣ ಪ್ರಮಾಣದ ತರಗತಿ ನಡೆಸಬೇಕು ಎಂದು ಒತ್ತಾಯಿಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿಭಾಗ ಸಂಘಟನಾ ಕಾರ್ಯದರ್ಶಿ ಅಪ್ಪು ಪಾಟೀಲ್, ನಗರ ಕಾರ್ಯದರ್ಶಿ ಧನುಷ್ ವಿದ್ಯಾರ್ಥಿಗಳಾದ ಕಿರಣರಾಜ್, ಸಂತೋಷ ನಾಯ್ಕ, ವಿಕ್ರಮ ಗೌಡ, ಪುನೀತ್, ಮಹೇಶ್ ಗೌಡ , ಯೋಗಿಶ್ ಗೌಡ ,ಯೋಗಿ ರಾಕೇಶ್ ,ನಿಖಿತ ಗೌಡ, ಆಸಿಫ್ ಸಂತೋಷ, ದರ್ಶನ ಇತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *