ರಾಮನಗರ ಜಿಲ್ಲೆ : ಜನವರಿ 19 ರ ವರೆಗೆ ರಾತ್ರಿ ಹಾಗೂ ವಾರಾಂತ್ಯ ಕರ್ಫ್ಯೂ

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಕೋವಿಡ್-19 ಮೂರನೇ ಅಲೆಯನ್ನು ಹಾಗೂ ಓಮಿಕ್ರಾನ್ ವೈರಾಣು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದ ಅನ್ವಯ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ದಿನಾಂಕ: 05-01-2022 ರಿಂದ 19-01-2022 ರವರೆಗೆ ರಾತ್ರಿ 10.00 ಗಂಟೆಯಿಂದ ಮರುದಿನ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂವನ್ನು ಹಾಗೂ ದಿನಾಂಕ:05-01-2022 ರಿಂದ 19-01-2022 ರವರೆಗಿನ ಅವಧಿಯಲ್ಲಿನ ಬರುವ ಶುಕ್ರವಾರ ರಾತ್ರಿ 10.00 ಗಂಟೆಯಿಂದ ಸೋಮವಾರ ಬೆಳಗ್ಗೆ 5.00 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂವನ್ನು ಜಾರಿಗೊಳಿಸಲು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್.ಕೆ ಅವರು ಆದೇಶ ಹೊರಡಿಸಿದ್ದಾರೆ.

ವಾರಂತ್ಯ ಕರ್ಫ್ಯೂ ಮಾರ್ಗಸೂಚಿಯಲ್ಲಿ ಶುಕ್ರವಾರ ರಾತ್ರಿ 8.00 ರಿಂದ ಸೋಮವಾರ ಬೆಳಗ್ಗೆ 5.00 ಗಂಟೆಯವರೆಗೆ ಸಾರ್ವಜನಿಕ ಸಂಚಾರ ಚಲನವಲನ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಉದ್ಯಾನವನಗಳಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಐಟಿ ಕೈಗಾರಿಕೆಗಳು ಕರ್ಫ್ಯೂ ನಿರ್ಬಂಧದಿಂದ ವಿನಾಯಿತಿ ಪಡೆದಿದೆ ಮತ್ತು ಅವರ ಉದ್ಯೋಗಿಗಳಿಗೆ ಸಂಘ/ಸಂಸ್ಥೆಯಿಂದ ನೀಡಲಾದ ಮಾನ್ಯವಾದ ಗುರುತಿನ ಚೀಟಿಯನ್ನು ಧರಿಸುವ ಮೂಲಕ ಸಂಚರಿಸಲು ಅವಕಾಶ ನೀಡಲಾಗಿರುತ್ತದೆ. ರೋಗಿಗಳು ಮತ್ತು ಅವರ ಪರಿಚಾರಕರು/ತುರ್ತು ಅಗತ್ಯವಿರುವ ವ್ಯಕ್ತಿಗಳು, ಲಸಿಕೆಯನ್ನು ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹ ವ್ಯಕ್ತಿಗಳು ಕನಿಷ್ಠ ಪುರಾವೆಗಳೊಂದಿಗೆ ಸಂಚರಿಸಲು ಅನುಮತಿಸಲಾಗಿದೆ. ಆಹಾರ ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‍ಗಳು ಮತ್ತು ಪ್ರಾಣಿಗಳ ಮೇವುಗಳೊಂದಿಗೆ ವ್ಯವಹರಿಸುವ ಅಂಗಡಿಗಳು ಕಾರ್ಯ ನಿರ್ವಹಿಸಲು ಅನುಮತಿಸಲಾಗಿದೆ. ರೆಸ್ಟೋರೆಂಟ್‍ನಲ್ಲಿ ತಿನಿಸುಗಳನ್ನು ತೆಗೆದುಕೊಮಡು ಹೋಗಲು ಹಾಗೂ ಮನೆಗೆ ತಲುಪಿಸಲು ಮಾತ್ರ ಅನುಮತಿಸಲಾಗಿದೆ.

ರೈಲುಗಳ ಪ್ರಯಾಣವನ್ನು ಅನುಮತಿಸಲಾಗಿದೆ. ಸಾರ್ವಜನಿಕ ಸಾರಿಗೆ, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಚಲನೆಯನ್ನು, ರೈಲ್ವೇ ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‍ಗಳು/ನಿಲುಗಡೆಗಳು/ಸ್ಟಾಂಡ್ಗಳಿಗೆ, ರೈಲು ಮತ್ತು ರಸ್ತೆಯ ಮೂಲಕ ಪ್ರಯಾಣಿಕರ ಸಂಚಾರ ಸುಲಭಗೊಳಿಸಲು ಅನುಮತಿಸಲಾಗಿದೆ. ಮಾನ್ಯವಾದ ಪ್ರಯಾಣ ದಾಖಲೆಗಳು/ಟಿಕೆಟ್‍ಗಳನ್ನು ಪ್ರದರ್ಶಿಸುವಾಗ ಮತ್ತು ಕೋವಿಡ್ ಸೂಕ್ತವಾದ ನಡುವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಮಾತ್ರ ಚಲನೆಯನ್ನು ಅನುಮತಿಸಲಾಗಿದೆ.
ಕೋವಿಡ್-19 ಸೂಕ್ತ ನಡವಳಿಕೆ ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳಿಗೆ ಕಟ್ಟುನಿಟಾಗಿ ಬದ್ದವಾಗಿರುವ ತೆರೆದ ಸ್ಥಳಗಳಲ್ಲಿ 200 ಕ್ಕಿಂತ ಹೆಚ್ಚು ಜನರು ಮತ್ತು ಮುಚ್ಚಿದ ಸ್ಥಳಗಳಲ್ಲಿ 100 ಜನರನ್ನು ಒಳಗೊಂಡಂತೆ ಮದುವೆ ಕಾರ್ಯಗಳನ್ನು ನಡೆಸಲು ಅನುಮತಿಸಲಾಗಿದೆ.

ಸದರಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಯಾವುದೇ ವ್ಯಕ್ತಿಯು ಮಾರ್ಗಸೂಚಿಗಳನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ- 2005ರ ಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತಿ ಕಲಂ 188 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *