ನದಿಗೆ ಇಳಿಯುವಾಗ ಜಾರಿದ ಡಿ ಕೆ ಶಿವಕುಮಾರ್ : ವಿಡಿಯೋ ಟ್ರೋಲ್ ಮಾಡಿದ ಬಿಜೆಪಿ

ರಾಮನಗರ (hairamanagara.in) : ಕನಕಪುರ ತಾಲ್ಲೂಕಿನ ಸಂಗಮದಲ್ಲಿ ಭಾನುವಾರ ಬೆಳಿಗ್ಗೆ ಕಾವೇರಿ ನದಿಗೆ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಲಿದರು. ಈ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾದ ಕೂಡಲೆ ಅದನ್ನು ಬಿಜೆಪಿ ತನ್ನ ಸೋಶಿಯಲ್ ಮಿಡಿಯಾ ಪೇಜ್ ನಲ್ಲಿ ಹಾಕಿ ‘ಡಿ.ಕೆ. ಶಿವಕುಮಾರ್ ದಾಟಲಿಲ್ಲ, ಮೇಕೆಯಾದರೂ ದಾಟಲಿ’ ಎಂದು ಟೀಕಿಸಿದೆ.


ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಈ ಪಾದಯಾತ್ರೆಯನ್ನು ‘ಕಾಂಗ್ರೆಸ್ ಮಾಡುತ್ತಿರುವ ಮೇಕೆದಾಟು ಪಾದಯಾತ್ರೆ ಸುಳ್ಳಿನ ಜಾತ್ರೆ’ ಎಂದು ಬಿಜೆಪಿ ಆರೋಪಿಸಿದೆ.

Leave a Reply

Your email address will not be published. Required fields are marked *