ಪಾದಯಾತ್ರೆಗೂ ಮುನ್ನ ಸಂಗಮದಲ್ಲಿ ಪೂಜೆ ಸಲ್ಲಿಸಿದ ಡಿ.ಕೆ. ಶಿವಕುಮಾರ್
ರಾಮನಗರ (hairamanagara.in) : ಕನಕಪುರ ಸಮೀಪದ ಸಂಗಮದಲ್ಲಿ ಭಾನುವಾರ ಬೆಳಗ್ಗೆ ಕೊರೆಯುವ ಚಳಿ ಮಧ್ಯೆ ತೆಪ್ಪದಲ್ಲಿ ಹೋಗಿ ನದಿ ಮಧ್ಯೆ ಸ್ನಾನ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾವೇರಿ ನದಿಗೆ ಪೂಜೆ ಸಲ್ಲಿಸಿ ಪಾದಯಾತ್ರೆ ನಿರಾತಂಕವಾಗಿ ಯಶಸ್ವಿಯಾಗಿ ಸಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಉದಯಿಸುವ ಸೂರ್ಯ, ಹರಿಯುವ ನೀರನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ, ಅದೇ ರೀತಿ ನಮ್ಮ ಪಾದಯಾತ್ರೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಯಾರು ಬೇಕಾದರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು, ನಾವು ಕೊರೋನಾ ನಿಯಮವನ್ನು ಪಾಲಿಸಿಕೊಂಡು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.