ಪಾದಯಾತ್ರೆಯನ್ನು ಅರ್ಧಕ್ಕೆ ನಿಲ್ಲಿಸಿ ವಿಶ್ರಾಂತಿ ತೆಗೆದುಕೊಳ್ಳಲು ಹೋದ ಸಿದ್ದರಾಮಯ್ಯ
ರಾಮನಗರ (hairamanagara.in) : ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅನಾರೋಗ್ಯದ ಕಾರಣದಿಂದ ಪಾದಯಾತ್ರೆಯನ್ನು ಅರ್ಧಕ್ಕೆ ನಿಲ್ಲಿಸಿ ವಿಶ್ರಾಂತಿಗೆ ತೆಗೆದುಕೊಳ್ಳಲು ತೆರಳಿದರು.
ಭಾನುವಾರ ಬೆಳಿಗ್ಗೆ 11.30ಕ್ಕೆ ಕಾರ್ಯಕರ್ತರೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಅವರು ಹೆಗ್ಗನೂರುವರೆಗೆ ಅಂದರೆ ಸುಮಾರು 7 ಕಿ.ಮೀ ನಡೆದಿದ್ದರು. ಈ ಸಂದರ್ಭದಲ್ಲಿ ಸಣ್ಣಗೆ ಜ್ವರ ಕಾಣಿಸಿಕೊಂಡ ಕಾರಣ ಅಲ್ಲಿಂದ ದೊಡ್ಡಾಲಹಳ್ಳಿಗೆ ತೆರಳಿದರು. ಶನಿವಾರ ಸಿದ್ದರಾಮಯ್ಯ ಅವರು ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಪಡೆದಿದ್ದರು. ಭಾನುವಾರ ಸಂಜೆ ಬೆಂಗಳೂರಿಗೆ ಹಿಂದಿರುಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.