ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರಿಗೆ ಕೋವಿಡ್ ಪಾಸಿಟಿವ್

ರಾಮನಗರ (hairamanagara.in) : ರಾಮನಗರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. ಸ್ವತಃ ಟಿ. ಜವರೇಗೌಡ ಅವರೆ ಈ ಮಾಹಿತಿಯನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಜ.9ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದರು, ಆದರೆ ಡಿ.ಕೆ. ಶಿವಕುಮಾರ್ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿಲ್ಲ.

Leave a Reply

Your email address will not be published. Required fields are marked *