ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಎಚ್.ಎಂ. ರೇವಣ್ಣ ಅವರಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು (hairamanagara.in) : ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ಎಮ್ ರೇವಣ್ಣಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವಣ್ಣಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮೇಕೆದಾಟು ಯೋಜನೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ನಾಯಕರು ಜ. 9ರಿಂದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ ಕಠಿಣ ನಿಯಮ ಜಾರಿಯಲ್ಲಿದ್ದರೂ ಲೆಕ್ಕಿಸದ ಕಾಂಗ್ರೆಸ್ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಬಂದು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಸರ್ಕಾರ ಕೊರೊನಾ ಸೋಂಕಿನ ಬಗ್ಗೆ ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದ ನಾಯಕರು ಪಾದಯಾತ್ರೆ ಮುಂದುವರಿಸಿದ್ದಾರೆ. ಹೀಗೆ ಕೊವಿಡ್ ನಿಯಮಗಳನ್ನ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.