ರಾಮನಗರದಲ್ಲಿ ನಡೆಯುವ ಸಭೆಯ ಬಳಿಕ ಮೇಕೆದಾಟು ಪಾದಯಾತ್ರೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು : ಸಿದ್ದರಾಮಯ್ಯ
ಬೆಂಗಳೂರು (hairamanagara.in) : ರಾಮನಗರದಲ್ಲಿ ಗುರುವಾರ ನಡೆಯುವ ಸಭೆ ಬಳಿಕ ಮೇಕೆದಾಟು ಪಾದಯಾತ್ರೆಯ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಗುರುವಾರ ಬೆಳಿಗ್ಗೆ ರಾಮನಗರದ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಯಾವ ನೋಟಿಸ್ ಬಂದಿಲ್ಲ, ಈವರೆಗೆ ನಮ್ಮ ಪಾದಯಾತ್ರೆಯನ್ನು ಏಕೆ ತಡೆದಿಲ್ಲ, ರಾಮನಗರದಲ್ಲಿ ಗುರುವಾರ ಬೆಳಿಗ್ಗೆ ನಡೆಯುವ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಹಾಗೂ ನಾಯಕರ ಸಭೆ ನಡೆಯಲಿದ್ದು, ಅಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.