ಮೆಣಸಿಗನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಕುರಿಗಳು ಬಲಿ : ಪದೇ ಪದೇ ಚಿರತೆ ದಾಳಿ : ಮನವಿ ಸಲ್ಲಿಸಿದರೂ ಕ್ರಮಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಚನ್ನಪಟ್ಟಣ (hairamanagara.in) : ತಾಲ್ಲೂಕಿನ ಮೆಣಸಿಗನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ದಾಳಿಮಾಡಿ ಏಳಕ್ಕೂ ಹೆಚ್ಚು ಕುರಿಗಳನ್ನು ಬಲಿತೆಗೆದುಕೊಂಡು ಹಲವು ಕುರಿಗಳು ಚಿರತೆ ದಾಳಿಯಿಂದ ಗಾಯಗೊಂಡಿರುವ ಘಟನೆ ನಡೆದಿದೆ.

ಸಣ್ಣಪ್ಪ ಎಂಬ ರೈತನ ಕುಟುಂಬದ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಕುರಿಗಳು ಚಿರತೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ರೈತ ಕಂಗಾಲಾಗಿದ್ದಾನೆ. ಕುರಿಗಳನ್ನು ಸಾಕಣೆ ಮಾಡಿಕೊಂಡು ಬಂದ ಆದಾಯದಲ್ಲಿ ತಮ್ಮ ಕುಟುಂಬದ ನಿರ್ವಹಣೆ ಮಾಡಿಕೊಂಡು ಸಣ್ಣಪ್ಪ ಜೀವನ ನಡೆಸುತ್ತಿದ್ದರು. ಮೆಣಸಿಗನಹಳ್ಳಿ ಗ್ರಾಮದ ಸುತ್ತಮುತ್ತ ಪದೇ ಪದೇ ಚಿರತೆ ದಾಳಿಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಚಿರತೆ ಆನೆ ದಾಳಿ ಬಗ್ಗೆ ಎಷ್ಟೇ ಮನವಿ ಸಲ್ಲಿಸಿದರು ಅರಣ್ಯ ಇಲಾಖೆ ಕ್ರಮಕೈಗೊಂಡಿಲ್ಲ ಹಾಗೂ ಪರಿಹಾರ ವಿತರಣೆ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಜೀವನಾಧಾರಕ್ಕೆ ಇದ್ದ ಕುರಿಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರನಿಗೆ ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *