ಜ. 30 ರಂದು ಹುತಾತ್ಮರ ದಿನಾಚರಣೆ
ರಾಮನಗರ (hairamanagara.in) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜನವರಿ 30 ರಂದು ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಮೌನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.