ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

ರಾಮನಗರ (hairamanagara.in) : ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ರಾಮಗನರ ಜಿಲ್ಲೆಯ ಕನಕಪುರ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್ಡಬ್ಲ್ಯೂ) ಹುದ್ದೆಗಳನ್ನು ಮಾಹೆಯಾನ ರೂ. 6000 ಗೌರವಧನದ ಆಧಾರದ ಮೇಲೆ ನೇಮಕ ಮಾಡಲು ಅರ್ಜಿ ಆಹ್ವಾನಿsಸಿದೆ.
ಅರ್ಜಿ ಸಲ್ಲಿಸುವ ವಿಕಲಚೇತನರು 18 ರಿಂದ 45ವರ್ಷ ವಯೋಮಿತಿಯವರಾಗಿದ್ದು, ಆರೋಗ್ಯವಂತವರಾಗಿರಬೇಕು, ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು, ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಆಸಕ್ತರು ಫೆಬ್ರವರಿ 28 ರೊಳಗಾಗಿ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ರಾಮನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ,ರಾಮನಗರ ಜಿಲ್ಲಾಧಿಕಾರಿಗಳ ನೂತನ ಕಛೇರಿ ಸಂಕೀರ್ಣ, ರಾಮನಗರ ಇಲ್ಲಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಕನಕಪುರ ತಾಲ್ಲೂಕಿನ ಎಂಆರ್ಡಬ್ಲ್ಯೂ ನಟರಾಜು ಡಿ.ಎಸ್(9986001574) ಇವರನ್ನು ಸಂಪರ್ಕಿಸುವುದು.

Leave a Reply

Your email address will not be published. Required fields are marked *