ಎಂ.ಹೆಚ್. ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ ಮತ್ತು ಸಹಾಯಕ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ
ರಾಮನಗರ (hairamanagara.in) : ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂ.ಹೆಚ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ: 01.02.2022 ರಂದು ಸಂಸ್ಥೆಯ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಂ.ಹೆಚ್. ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಎಚ್. ಚಂದ್ರಶೇಖರ್ ರವರಿಗೆ ಎಲ್ಲಾ ವಿಭಾಗಗಳ ಪ್ರಾಂಶುಪಾಲರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಪುಷ್ಪಗುಚ್ಚವನ್ನು ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀಯುತ ಹೆಚ್.ಚಂದ್ರಶೇಖರ್ ರವರು ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ ಈ ಸಂಸ್ಥೆಯನ್ನು ಸ್ಥಾಪಿಸಿದೆ ಎಂದು ಹೇಳಿದರು. ಹಾಗೂ ವಿದ್ಯಾರ್ಥಿಗಳ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ನಾವು, ನೀವೆಲ್ಲರೂ ನಿರಂತರ ಪ್ರಯತ್ನಿಸೋಣ ಹಾಗೂ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸೌಲಭ್ಯಗಳನ್ನು ಒದಗಿಸಲು ಸದಾ ಸಿದ್ದರಿದ್ದೇವೆ ಎಂದು ಸಂಸ್ಥೆಯ ಎಲ್ಲಾ ಸಿಬ್ಬಂದಿಗಳಿಗೆ ಕರೆ ನೀಡಿದರು. ನಂತರ ಎಂ.ಹೆಚ್. ಸಮೂಹ ಶಿಕ್ಷಣ ಸಂಸ್ಥೆಗಳ ಎಲ್ಲಾ ಸಿಬ್ಬಂದಿ ವರ್ಗದವರಿಗೆ ತಮ್ಮ ಕುಟುಂಬದ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿದರು.

ಈ ಕಾರ್ಯಕ್ರಮದ ಜೊತೆಯಲ್ಲಿ ಎಂ.ಹೆಚ್.ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಹಾಯಕ ಸಿಬ್ಬಂದಿಗಳಿಗೆ, ವಾಹನ ಚಾಲಕರಿಗೆ ಹಾಗೂ ಸ್ವಚ್ಚತಾ ಕಾರ್ಯದ ಸಿಬ್ಬಂದಿಗಳಿಗೆ ಅವರ ಸೇವೆ, ಕಾರ್ಯದಕ್ಷತೆ, ಪ್ರಾಮಾಣಿಕತೆಗೆ ಕಿರುಕಾಣಿಕೆಯನ್ನು ನೀಡುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಖಜಾಂಚಿ ಶ್ರೀಮತಿ ರತ್ನ ಚಂದ್ರಶೇಖರ್, ಕಾರ್ಯದರ್ಶಿಯವರಾದ ಶ್ರೀಮತಿ ಹೆಚ್.ಸಿ. ಅಶ್ವಿನಿ ವೆಂಕಟೇಶ್, ನಿರ್ದೇಶಕರಾದ ಶ್ರೀಮತಿ ಹೆಚ್.ಸಿ. ಅಮಿತಾ ದರ್ಶನ್ ಹಾಗೂ ಶ್ರೀ ದರ್ಶನ್ ಹಾಗೂ ಎಲ್ಲಾ ವಿಭಾಗದ ಪ್ರಾಂಶುಪಾಲರುಗಳು, ಬೋದಕ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.