ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವಥ್ ನಾರಾಯಣ ಹುಟ್ಟುಹಬ್ಬ ನಿಮಿತ್ತ ಜಿಲ್ಲಾ ಬಿಜೆಪಿ, ಜನಸೇವಾ ಫೌಂಡೇಷನ್ ವತಿಯಿಂದ ವಿವಿಧ ಜನೋಪಕಾರಿ ಕಾರ್ಯ

ರಾಮನಗರ (hairamanagara.in) : ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರ ಜನ್ಮದಿನದ ಪ್ರಯುಕ್ತ ರಾಮನಗರ ಜಿಲ್ಲಾ ಬಿಜೆಪಿ ಹಾಗೂ ನಗರದ ಜನಸೇವಾ ಫೌಂಡೇಷನ್ ವತಿಯಿಂದ ನಗರದಲ್ಲಿ ಬುಧವಾರ ಜಂಟಿಯಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮೊದಲಿಗೆ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜು ಹಾಗೂ ಜನಸೇವಾ ಫೌಂಡೇಷನ್ ಅಧ್ಯಕ್ಷ ಡಿ.ನರೇಂದ್ರ ನೇತೃತ್ವದಲ್ಲಿ ಬಿಜೆಪಿಯ ಪ್ರಮುಖ ಮುಖಂಡರು ನಗರದ ಮುಖ್ಯರಸ್ತೆಯಲ್ಲಿರುವ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರಿಗೆ ಆಯರಾರೋಗ್ಯ, ಸಮೃದ್ಧ, ಆರೋಗ್ಯಕರ ಜೀವನ ಹಾಗೂ ಸರ್ವತೋಮುಖ ಅಭಿವೃದ್ಧಿ ಕೋರಿ ವಿಶೇಷ ಪೂಜೆ ಸಲ್ಲಿಸಿದರು.

ಆ ನಂತರ ಜಿಲ್ಲಾ ಆಸ್ಪತ್ರೆಗೆ ತೆರಳಿದ ಬಿಜೆಪಿ ಮುಖಂಡರು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು. ಇದರ ಜೊತೆಗೆ ನಗರದ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರ ಹುಟ್ಟುಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಲಾಯಿತು. ಇದಾದ ತರುವಾಯ ಅರ್ಚಕರಹಳ್ಳಿ ಬಳಿ ಇರುವ ನಂದಗೋಕುಲ ವೃದ್ಧಾಶ್ರಮದ ಹಿರಿಯ ಜೀವಗಳಿಗೆ ಹಣ್ಣು- ಹಂಪಲು ವಿತರಣೆ ಮಾಡಲಾಯಿತು. ನಗರದ ಶತಮಾನೋತ್ಸವದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ 750 ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಲೇಖನಿ ಕೊಡುಗೆ ನೀಡಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಜಿಲ್ಲೆಯ ‌ಸಮಗ್ರ ಅಭಿವೃದ್ಧಿಯನ್ನು ಮುಖ್ಯ ಗುರಿಯಾಗಿಟ್ಟುಕೊಂಡು ಸರ್ಕಾರದಿಂದ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಈ ದಿಕ್ಕಿನಲ್ಲಿಅವರ ಜನ್ಮದಿನದ ಪ್ರಯುಕ್ತ
ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರ ಶ್ರೇಯೋಭಿಲಾಷಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯಕ್ಕೆ ಇನ್ನೂ ಉನ್ನತ ಮಟ್ಟದಲ್ಲಿ ಸೇವೆ ಸಲ್ಲಿಸಲು ಭಗವಂತ ಶಕ್ತಿ ಕೊಡಲಿ ಎಂದು ಪ್ರಾರ್ಥನೆ ಸಲ್ಲಿಸುವುದರ ಜೊತೆಗೆ, ಜಿಲ್ಲಾ ಬಿಜೆಪಿ ವತಿಯಿಂದ ಅನೇಕ ಜನೋಪಕಾರಿ ಕಾರ್ಯಗಳನ್ನು ಮಾಡಲಾಯಿತು ಎಂದು ತಿಳಿಸಿದರು.

ಜನಸೇವಾ ಫೌಂಡೇಷನ್ ಅಧ್ಯಕ್ಷ, ರಾಮನಗರ ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಿ.ನರೇಂದ್ರ ಮಾತನಾಡಿ, ಅಭಿವೃದ್ಧಿಯ ಹರಿಕಾರರಾದ ಜಿಲ್ಲೆಯ ಸುಪುತ್ರ ಡಾ.ಅಶ್ವಥ್ ನಾರಾಯಣ ಅವರು ರಾಮನಗರ ಜಿಲ್ಲಾ ಮಂತ್ರಿಗಳಾಗಿ ಅಭಿವೃದ್ಧಿ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಹೆಜ್ಜೆ ಗುರುತು ಮೂಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಮಾಡುವ ದಿಕ್ಕಿನಲ್ಲಿ ಇನ್ನಷ್ಟು ಉನ್ನತ ಅವಕಾಶ ದೊರೆಯಲಿ ಎಂದು ಜನಸೇವಾ ಫೌಂಡೇಷನ್ ವತಿಯಿಂದ ಶುಭ ಹಾರೈಸಿದರು.

ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಕೆ.ಎಸ್.ಶಿವರಾಜು (ಜಯಣ್ಣ), ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜಣ್ಣ, ರಾಜೇಶ್, ರುದ್ರದೇವರು, ಜಿಲ್ಲಾ ಉಪಾಧ್ಯಕ್ಷ ಸುರೇಶ್, ಜಿಲ್ಲಾ ಮಾಧ್ಯಮ ಸಂಚಾಲಕ ಚಂದ್ರಶೇಖರ್ ರೆಡ್ಡಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಂಕರ್, ಜಿಲ್ಲಾ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಸಂಚಾಲಕ ಸಂಜಯ್ ಪಿ. ಜೈನ್, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಝೆಡ್ ಪಿ ಕೃಷ್ಣಪ್ಪ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಚೌಕಹಳ್ಳಿ ನಾರಾಯಣ ರೆಡ್ಡಿ, ರಾಮನಗರ ಗ್ರಾಮಾಂತರ ಮಂಡಲದ ಅಧ್ಯಕ್ಷ ಗೋಪಾಲ್, ರಾಮನಗರ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ದರ್ಶನ್ ಜಯಪ್ರಕಾಶ್, ಕಾನೂನು ಪ್ರಕೋಷ್ಟ ಸಂಚಾಲಕ ವಿನೋದ್ ಭಗತ್, ಮುಖಂಡರಾದ ಸಿಂಗ್ರಯ್ಯ, ರಾಮಾಂಜನೇಯ, ಮಾರೇಗೌಡ, ಗುಂಗರಹಳ್ಳಿ ಚನ್ನಪ್ಪ, ರಾಜಶೇಖರ್, ದಯಾನಂದ್, ಹಿರಿಯ ಮುಖಂಡರಾದ ಎಸ್ ಆರ್ ನಾಗರಾಜ್, ನಾಗೇಶ್,ಪದ್ಮನಾಭ್, ಸುರೇಶ್ (ಮೆಡಿಕಲ್) ಮಹಿಳಾ ಮೋರ್ಚಾದ ಮುಖಂಡರಾದ ಹೇಮಾವತಿ,ನಿರ್ಮಲಾ ಇನ್ನೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *