ಸಸಿ ನೆಡುವ ಮೂಲಕ ನರೇಗಾ ದಿವಸ್ ಆಚರಣೆ
ರಾಮನಗರ (hairamanagara.in) : ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ಇಂದು ನರೇಗಾ ದಿವಸ್ ಆಚರಣೆ ಪ್ರಯುಕ್ತ ರಾಮನಗರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ರಾಮನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಮ್ ಅವರು ಸಸಿ ನೆಟ್ಟು, ನೀರೆರೆಯುವ ಮೂಲಕ ಹಾಗೂ ಕೂಲಿ ಕಾರ್ಮಿಕರ ಜೊತೆಗೆ ನರೇಗಾ ದಿವಸ್ ಆಚರಣೆ ಮಾಡಿದರು.
ನಂತರ ಮಾತಾನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನರೇಗಾ ಯೋಜನೆಯಡಿ ಸಸಿಗಳನ್ನು ಬೆಳೆಯುವ ವಿಧಾನ ಹಾಗೂ ಪೋಷಣೆಯ ಬಗ್ಗೆ ಮಾಹಿತಿ ತಿಳಿದಕೊಂಡು ಹೆಚ್ಚು ಗಿಡಗಳನ್ನು ಬೆಳೆಸಬೇಕೆಂದರು.

ಈ ಸಂದರ್ಭದಲ್ಲಿ ರಾಮನಗರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಆರ್.ಎಫ್.ಓ, ಸಾಮಾಜಿಕ ಅರಣ್ಯ ಸಿಬ್ಬಂದಿ, ಜಿಲ್ಲಾ ಪಂಚಾಯತಿ ನರೇಗಾ ಸಿಬ್ಬಂದಿ ಹಾಗೂ ತಾಲ್ಲೂಕು ಪಂಚಾಯತಿ ನರೇಗಾ ಸಿಬ್ಬಂದಿ ಉಪಸ್ಥಿತರಿದ್ದರು.