ಫೆ.6 ರಂದು ಬಿ.ಎಂ ರೋಡ್, ಅರ್ಚಕರಹಳ್ಳಿ, ರಾಯರದೊಡ್ಡಿ, ಇಂಡಸ್ಟ್ರಿಯಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ರಾಮನಗರ (hairamanagara.in) : ರಾಯರದೊಡ್ಡಿ ಫೀಡರ್ ಪ್ರದೇಶದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಫೆ.6 ರ ಭಾನುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಬಿ.ಎಂ ರೋಡ್, ಅರ್ಚಕರಹಳ್ಳಿ, ರಾಯರದೊಡ್ಡಿ, ಇಂಡಸ್ಟ್ರಿಯಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಗ್ರಾಹಕರು ಸಹಕರಿಸುವಂತೆ ರಾಮನಗರ ವಿಭಾಗದ ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್ ಕೋರಿದ್ದಾರೆ.

Leave a Reply

Your email address will not be published. Required fields are marked *