ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಉಚಿತ ಇ-ಶ್ರಮ ಕಾರ್ಡ್ ನೋಂದಣಿ ಶಿಬಿರ

ಹಾಯ್‌ ರಾಮನಗರ ((hairamanagara.in) 06 ಫೆಬ್ರವರಿ 2022

ರಾಮನಗರ : ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ರಾಮನಗರ ಜಿಲ್ಲಾ ಸಮಿತಿಯ ವತಿಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ನಗರದ ಪೂಲ್ ಬಾಗ್ (ವಾರ್ಡ್ ಸಂಖ್ಯೆ : 16) ನಲ್ಲಿ ಉಚಿತ ಇ-ಶ್ರಮ ಕಾರ್ಡ್ ಶಿಬಿರವನ್ನು ನಡೆಸಲಾಯಿತು.

ಈ ಶಿಬಿರದಲ್ಲಿ ಸುಮಾರು 150ಕ್ಕಿಂತ ಹೆಚ್ಚು ಕಾರ್ಡುಗಳನ್ನು ನೋಂದಣಿ ಮಾಡಲಾಯಿತು. ಈ ಸಂದರ್ಭದಲ್ಲಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ರಾಮನಗರ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಬಕಾಶ್ ರವರು ಎಲ್ಲಾ ಅಸಂಘಟಿತ ಕಾರ್ಮಿಕರು ಇ-ಶ್ರಮ ಕಾರ್ಡ್ ಅನ್ನು ನೋಂದಣಿ ಮಾಡಿಸಿಕೊಂಡು ಸರ್ಕಾರದಿಂದ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ರಾಮನಗರ ಜಿಲ್ಲಾ ಸಮಿತಿ ವತಿಯಿಂದ ರಾಮನಗರದ ವಾರ್ಡುಗಳಲ್ಲಿ ಉಚಿತ ಶಿಬಿರವನ್ನು ಏರ್ಪಡಿಸಲಾಗುತ್ತಿದೆ. ಎಲ್ಲಾ ಅಸಂಘಟಿತ ಕಾರ್ಮಿಕರು ಈ ಒಂದು ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಮುಖಂಡರಾದ ಮತೀನ್, ಹಿತಾಯತ್, ಸಾಫರ್, ಮೋಶಿನ್ ಇತರರು ಇದ್ದರು.

Leave a Reply

Your email address will not be published. Required fields are marked *