ಹಾರೋಹಳ್ಳಿ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ‘ರಸ್ತೆ ದುರಸ್ಥಿಗೆ ಒತ್ತಾಯಿಸಿ ಪಾದಯಾತ್ರೆ ಮಾಡಲು ಸಿದ್ಧತೆ’
ಹಾಯ್ ರಾಮನಗರ (hairamanagara.in) 06 ಫೆಬ್ರವರಿ 2022
ಕನಕಪುರ : ಕನಕಪುರ ಮೇಕೆದಾಟು ಪಾದಯಾತ್ರೆ ಮಾದರಿಯಲ್ಲಿ ರಸ್ತೆಗಾಗಿ ನಮ್ಮ ನಡಿಗೆ ಎಂಬ ಪಾದಯಾತ್ರ ನಡೆಸಲು ಹಾರೋಹಳ್ಳಿ ನಾಗರಿಕ ಹಿತರಕ್ಷಣಾ ಸಮಿತಿ ಸಿದ್ಧತೆ ನಡೆಸಿದೆ. ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಅನೇಕ ಮನವಿ ಒತ್ತಾಯಗಳನ್ನು ಮಾಡಿದರು ಎಚ್ಚೆತ್ತುಕೊಳ್ಳದ ಸರ್ಕಾರ ಮತ್ತು ಗುತ್ತಿಗೆದಾರರು ವಿರುದ್ಧ ಹಾರೋಹಳ್ಳಿ ನಾಗರಿಕ ಹಿತರಕ್ಷಣಾ ಸಮಿತಿ ಹೋರಾಟಕ್ಕೆ ಸಿದ್ಧತೆ ನಡೆಸಿದೆ ಈಗಾಗಲೇ ಪಾದಯಾತ್ರೆಗೆ ಜನಜಾಗೃತಿ ಮೂಡಿಸಲು ಭಿತ್ತಿಪತ್ರಗಳನ್ನು ಮುದ್ರಿಸಲಾಗಿದೆ.
ಕಳೆದ ಐದಾರು ವರ್ಷಗಳಿಂದಲೂ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ವೃದ್ಧಿ ಕಾಮಗಾರಿ ಆರಂಭವಾಗಿ ಐದಾರು ವರ್ಷ ಕಳೆದರೂ ಬೆಂಗಳೂರಿನ ನೈಸ್ ರೋಡ್ ಜಂಕ್ಷನ್ ಕನಕಪುರದ ತುಗಣಿ ಗ್ರಾಮದವರು ಸುಮಾರು 40 ಕಿಲೋಮೀಟರ್ ರಸ್ತೆ ಅಗಲೀಕರಣ ಕಾಮಗಾರಿ ಸ್ಥಗಿತಗೊಂಡು ರಸ್ತೆ ಸಂಪೂರ್ಣವಾಗಿ ಅಣ್ಣ ಗುಂಡಿಗಳು ಬಿದ್ದು ವಾಹನ ಸವಾರರು ಓಡಾಡಲು ಆಗದ ಸ್ಥಿತಿ ನಿರ್ಮಾಣವಾಗಿದೆ.
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ನರಕ ಸದೃಶ್ಯವಾಗಿ ಪರಿಣಮಿಸಿದೆ ಇದೇ ರಸ್ತೆಯಲ್ಲಿ ಓಡಾಡುವ ಜನಪ್ರತಿನಿಧಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ ಶಾಸಕರು ಮತ್ತು ಸಂಸದರು ಹಾಗೂ ಜನಪ್ರತಿನಿಧಿಗಳು ರಾಜ್ಯದ ಅಭಿವೃದ್ಧಿ ಮತ್ತು ಇತರ ವಿಚಾರಗಳನ್ನು ಚರ್ಚೆ ಮಾಡುತ್ತಾರೆ ಆದರೆ ಈ ರಸ್ತೆ ದುರಸ್ತಿ ಬಗ್ಗೆ ತುಟಿಬಿಚ್ಚದೆ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸಿದರೂ ಜನರಿಗಾಗುತ್ತಿರುವ ಕಿರಿಕಿರಿ ಬಗ್ಗೆ ಮೌನವಹಿಸಿದ್ದಾರೆ.

ರಸ್ತೆಯಲ್ಲಿ ಪ್ರತಿ ನಿತ್ಯ ಸಂಚರಿಸುವ ನೂರಾರು ವಾಹನ ಸವಾರರು ಬಿದ್ದು ಕೈಕಾಲುಗಳನ್ನು ಮುರಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಈಗಾಗಲೇ ಅನೇಕ ಜನರು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಈ ರಸ್ತೆ ಅವ್ಯವಸ್ಥೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಹತ್ತಾರು ಬರಿ ಹಲವು ಸಂಘ-ಸಂಸ್ಥೆ ಮನವಿ ಮಾಡಿದ್ದರು ಇಲಾಖೆ ಅಧಿಕಾರಿಗಳು ಸ್ಥಳೀಯ ಜನರ ಜನಪ್ರತಿನಿಧಿಗಳು ರಸ್ತೆ ದುರಸ್ತಿ ಮಾಡುವ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.
ಈ ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕ್ಷೇತ್ರದ ಶಾಸಕರು ಸಂಸದರ ಗಮನ ಸೆಳೆದು ತುರ್ತಾಗಿ ರಸ್ತೆ ಅಭಿವೃದ್ಧಿ ಮಾಡಲು ಹಾರೋಹಳ್ಳಿ ಯಿಂದ ತಲಘಟ್ಟಪುರ ನೈಸ್ ರಸ್ತೆಯವರೆಗೂ ನಮ್ಮ ನಡಿಗೆ ರಸ್ತೆ ನಿರ್ಮಾಣಕ್ಕಾಗಿ ಎಂಬ ಧ್ಯೇಯ ವಾಕ್ಯ ದಲ್ಲಿ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ ಜನಾಭಿಪ್ರಾಯ ಸಂಗ್ರಹಿಸಲು ಫೆಬ್ರವರಿ 13ರಂದು ಭಾನುವಾರ ಹಾರೋಹಳ್ಳಿಯಲ್ಲಿ ವಿದ್ಯಾ ಸಂಸ್ಥೆ ಆವರಣದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಗೆ ಕನಕಪುರ ತಾಲೂಕಿನ ಎಲ್ಲಾ ನಾಗರಿಕ ಬಂಧುಗಳು ಸಂಘ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಆಗಮಿಸಿ ರಸ್ತೆ ದುರಸ್ತಿ ಹೋರಾಟಕ್ಕೆ ಪಾದಯಾತ್ರೆ ಬಗ್ಗೆ ತಮ್ಮ ಸಲಹೆ ಸೂಚನೆಗಳು ಹಾಗೂ ಅಭಿಪ್ರಾಯಗಳು ಮಾರ್ಗದರ್ಶನಗಳನ್ನು ನೀಡಬೇಕಾಗಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಭಿತ್ತಿ ಪತ್ರದ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.