ಮನೆ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ಅರ್ಜಿ ಆಹ್ವಾನ

ಹಾಯ್ ರಾಮನಗರ (hairamanagara.in) 07 ಫೆಬ್ರವರಿ 2022

ರಾಮನಗರ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ 2021-22ನೇ ಸಾಲಿಗೆ ಪರಿಶಿಷ್ಟ ಪಂಗಡದ  ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು/ಒಂಟಿ ಮಹಿಳೆಯರು, ಮೀನುಗಾರರಿಗೆ, ವಸತಿ ರಹಿತ ನಿವೇಶನ(ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ವಸತಿ ನಿರ್ಮಾಣ ಯೋಜನೆಯಡಿಯಲ್ಲಿ ಮನೆ ನಿರ್ಮಿಸಿ ಕೊಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಫಲಾನುಭವಿಗಳು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಟ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, 18 ವರ್ಷ ಮೇಲ್ಪಟ್ಟವರಾಗಿರಬೇಕು, ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.98,000 ಹಾಗೂ ನಗರ ಪ್ರದೇಶವಾದಲ್ಲಿ ರೂ1,20,000 ಮಿತಿಯೊಳಗಿರಬೇಕು, ಕುಟಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರ ಸಂಸ್ಧೆಯಲ್ಲಿ ನೌಕರಿಯಲ್ಲಿರಬಾರದು ಇವರು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರ,  ಜಾತಿ ಪ್ರಮಾಣ ಪತ್ರ, ಕುಟುಂಬದ ವಾರ್ಷಿಕ ವರಮಾನ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ ಬುಕ್‍ನ ಮೊದಲ ಪುಟದ ಪ್ರತಿ, ಸಂಬಂಧಿಸಿದ ಪ್ರಾಧಿಕಾರದಿಂದ ನಿರಾಪೇಕ್ಷಣಾ ಪತ್ರ, ಖಾತೆ, ಸೈಟ್/ನಿವೇಶನಕ್ಕೆ ಸಂಬಂಧ ಪಟ್ಟ ದಾಖಲಾತಿಳೊಂದಿಗೆ  ಆನ್‍ಲೈನ್ ಮೂಲಕ ಅರ್ಜಿ/ದಾಖಲೆಗಳನ್ನು ನಿಗಮದ ವೆಬ್‍ಸೈಟ್ www.karnataka.gov.in/kmvstdcl. ಮೂಲಕ ಆಪ್‍ಲೋಡ್ ಮಾಡಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ, ಗೌಸಿಯಾ ಕಾಲೇಜು ಎದುರು, ಹೊಸ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ ಅಥವಾ ದೂರವಾಣಿ ಸಂಖ್ಯೆ : 080-29911115 ಹಾಗೂ ನಿಗಮದ ವೆಬ್‍ಸೈಟ್‍ನಲ್ಲಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *