ವಿಶ್ವ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಹಾಯ್ ರಾಮನಗರ (hairamanagara.in) 09 ಫೆಬ್ರವರಿ 2022

ರಾಮನಗರ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎಸ್.ಬಿ.ಸಿ.ಸಿ ಘಟಕ ರಾಮನಗರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಡಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲ್ಲಿ “ವಿಶ್ವ ಕ್ಯಾನ್ಸರ್ ದಿನ” ಹಾಗೂ ಸ್ವಪ್ತಾಹ ಕಾರ್ಯಕ್ರಮದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 

ವೈದ್ಯಾಧಿಕಾರಿ ಡಾ. ಚೈತನ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ವಿಶ್ವ ಕ್ಯಾನ್ಸರ್ ದಿನಾಚರಣೆಯ ಮುಖ್ಯ ಉದ್ದೇಶ ಕ್ಯಾನ್ಸರ್ ಬಗ್ಗೆ ತಪ್ಪು ಕಲ್ಪನ್ನೆಗಳು, ಕಟ್ಟುಕತೆಗಳನ್ನು ಹೋಗಲಾಡಿಸಿ ಜನರಿಗೆ ಇದರ ಬಗ್ಗೆ ಶಿಕ್ಷಣ ನೀಡುವುದರ ಜೊತೆಗೆ ಸರಿಯಾದ ಚಿಕಿತ್ಸೆಯನ್ನು ಪಡೆಯಲು ಮತ್ತು ಸಾವಿನ ಸಂಖ್ಯೆ ಕಡಿಮೆ ಮಾಡುವುದು ಹಾಗೂ ಆರೈಕೆಯ ಅಂತರವನ್ನು ಕಡಿತಗೊಳಿಸಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್, ಮಾತನಾಡಿ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಫೆಬ್ರವರಿ 4 ರಿಂದ 10 ರವರೆಗೆ ಜಾಗೃತಿ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಮುದಾಯದಲ್ಲಿ ಸಾಮಾನ್ಯ ಮನುಷ್ಯನಿಗೆ ಗಂಭೀರ ಮತ್ತು ಅಪಾಯಕಾರಿ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸ ಬೇಕು ಅದರಲ್ಲು ಮಹಿಳೆಯರಲ್ಲಿ ಸ್ತನ, ಗರ್ಭಕಂಠ ಹಾಗು ಅಂಡಾಶಯ ಮತ್ತು ಪುರುಷರಲ್ಲಿ ಶ್ವಾಸಕೋಶ, ಜಠರ, ಅನ್ನನಾಳ ಮತ್ತು ಜನನಗ್ರಂಥಿ, ಕ್ಯಾನ್ಸರ್‍ಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವಂತೆ ಸಲಹೆ ನೀಡಿದರು

ಜಿಲ್ಲಾ ಸಂಯೋಜಕ ಸುರೇಶ್ ಬಾಬು ಮಾತನಾಡಿ ಕ್ಯಾನ್ಸರ್‍ನಿಂದ ಬಳಲುತ್ತಿರುವ ರೋಗಿಗಳಿಗೆ ಕೋವಿಡ್ ಸೋಂಕು ಹರಡುವ ಸಾಧ್ಯತೆಯಿದ್ದು ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಜೊತೆಗೆ ಕೋವಿಡ್ ನಿಯಂತ್ರಿಸಲು ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈಗಳ ಸ್ವಚ್ಛತೆ, ಜೊತೆಗೆ ವೈಯಕ್ತಿಕ, ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜ್ವರ, ನೆಗಡಿ, ಗಂಟಲು ನೋವು, ಇತ್ಯಾದಿ ಲಕ್ಷಣಗಳು ಕಂಡು ಬಂದ ತಕ್ಷಣ ಸೂಕ್ತ ಚಿಕಿತ್ಸೆ ಪಡೆದು ಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್.ಬಿ.ಸಿ.ಸಿ ಸಂಯೋಜಕರಾದ ಸುರೇಶ್‍ಬಾಬು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಾದ ಪ್ರಮೀಳ, ವಿಜಯಲಕ್ಷ್ಮೀ, ಶುಶ್ರೂಷಣಾಧಿಕಾರಿ ನಾಗಮಣಿ, ಲೀಲಾ, ಶೋಭಾ, ಆರೋಗ್ಯ ಸಿಬ್ಬಂದಿ, ಆಶಾ – ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಹಾಜರಿದ್ದರು.

Leave a Reply

Your email address will not be published. Required fields are marked *