ಫೆ. 16ರಂದು ಶ್ರೀ ಆದಿ ನಿರ್ವಾಣ ಮಹಾ ಶಿವಯೋಗಿಗಳವರ ಜಾತ್ರಾ ಮಹೋತ್ಸವ

ಹಾಯ್ ರಾಮನಗರ (hairamanagara.in) 13 ಫೆಬ್ರವರಿ 2022

ಕನಕಪುರ : ಶ್ರೀ ದೇಗುಲಮಠದಲ್ಲಿ ಪ್ರತಿವರ್ಷ ವಿಜ್ರಂಭಣೆಯಿಂದ ನಡೆಯುತ್ತಿದ್ದ ಶ್ರೀ ಆದಿ ನಿರ್ವಾಣಮಹಾಶಿವಯೋಗಿಗಳವರ ಜಾತ್ರಾ ಮಹೋತ್ಸವವನ್ನು ಫೆಬ್ರವರಿ 16 ರ ಬುಧವಾರದಂದು ಕೋವಿಡ್ 19 ರ ರೂಪಾಂತರಿ ವೈರಾಣು ಸೋಂಕು ವ್ಯಾಪಕವಾಗಿ ಹಬ್ಬಿರುವುದರಿಂದ ಸರಳವಾಗಿ ಆಚರಿಸಲಾಗುತ್ತಿದೆ.

ಈ ದಿನ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಜನಸಂದಣಿ ಅಧಿಕವಾಗದಂತೆ ಕೇವಲ ಸಾಂಪ್ರದಾಯಿಕವಾಗಿ ಧಾರ್ಮಿಕ ಆಚರಣೆಗಳನ್ನು ಒಂದೇ ದಿನಕ್ಕೆ ಸೀಮಿತಗೊಳಿಸಿ ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಭಕ್ತ ಮಹಾಶಯರು ಸರ್ಕಾರ ರಚಿಸಿರುವ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಶ್ರೀಗುರು ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ದೇಗುಲ ಮಠದ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ತಿಳಿಸಿದರು.

Leave a Reply

Your email address will not be published. Required fields are marked *