ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಸೋಬಾನೆ ಚಿಕ್ಕಮ್ಮ ಅವರಿಗೆ ಸನ್ಮಾನ
ಹಾಯ್ ರಾಮನಗರ (hairamanagara.in) 15 ಫೆಬ್ರವರಿ 2022
ರಾಮನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯ ಕಛೇರಿಯಲ್ಲಿ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಸೋಬಾನೆ ಚಿಕ್ಕಮ್ಮ ಅವರಿಗೆ ಸನ್ಮಾನ ಮಾಡಲಾಯಿತು.
ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎನ್ ಹರೀಶ್ ಮಾತನಾಡಿ ನಾಡಿನ ಸಂಸ್ಕೃತಿಯನ್ನು ಉಳಿಸಲು ಸಾಕಷ್ಟು ಮಹಿಳೆಯರು ಶ್ರಮಿಸಿದ್ದಾರೆ, ಅವರಲ್ಲಿ ಚಿಕ್ಕಮ್ಮ ಅವರು ಒಬ್ಬರು. ಸೋಬಾನೆ ಪದ ನಮ್ಮ ನಾಡಿನ ಸಂಸ್ಕೃತಿ ಈ ಜಾನಪದ ಸಂಸ್ಕೃತಿಯನ್ನು ದೇಶದಾದ್ಯಂತ ಬೆಳೆಸಲು ಶ್ರಮಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಮಿತಿ ಸದಸ್ಯ ಕಾಳಯ್ಯ, ವಕೀಲರು ಹಾಗೂ ದಲಿತ ಮುಖಂಡ ಮಲ್ಲಿಕಾರ್ಜುನ್, ಕಲಾ ತಂಡದವರು ಹಾಗೂ ಇನ್ನಿತರು ಉಪಸ್ಥಿತರಿದ್ದರು.