ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆ : ಹನ್ಸಿಕಾ ಪ್ರಥಮ
ಹಾಯ್ ರಾಮನಗರ (hairamanagara.in) 19 ಫೆಬ್ರವರಿ 2022
ರಾಮನಗರ : ಈಚೆಗೆ ನಡೆದ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ರಾಮನಗರದ ಪವಿತ್ರ ರಾಷ್ಟ್ರೀಯ ವಿದ್ಯಾಲಯದ 9ನೇ ತರಗತಿ ವಿದ್ಯಾರ್ಥಿನಿ ಹನ್ಸಿಕಾ ಪ್ರಥಮ ಬಹುಮಾನ ಪಡೆದಿದ್ದು, 5 ಸಾವಿರ ರೂ. ನಗದು ಪುರಸ್ಕಾರ ತಮ್ಮದಾಗಿಸಿಕೊಂಡರು.
ದೇಶದಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಅದನ್ನು ನಿಯಂತ್ರಿಸಲು ನಗರ ಪ್ರದೇಶಗಳಲ್ಲಿ ವಾಯು ಶುದ್ಧೀಕರಣ ಯಂತ್ರಗಳನ್ನು ಸ್ಥಾಪಿಸುವ ಬಗ್ಗೆ ಅವರು ಪ್ರಯೋಗ ಮಂಡಿಸಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾದರು.
ಕನಕಪುರ ತಾಲ್ಲೂಕಿನ ಕಲ್ಲನಕುಪ್ಪೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ತನುಶ್ರೀ ದ್ವಿತೀಯ ಬಹುಮಾನವಾಗಿ 3 ಸಾವಿರ ರೂ. ಹಾಗೂ ಪಡೆದರು. ಜಿಲ್ಲಾ ಮಟ್ಟದಲ್ಲಿ ಒಟ್ಟು 9 ತಂಡ ಭಾಗವಹಿಸಿದ್ದು, ಎರಡು ತಂಡಗಳನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಯಿತು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಈ ಸ್ಪರ್ಧೆ ಆಯೋಜಿಸಲಾಗಿತ್ತು.