ನಾಳೆ (ಫೆ.20) ಕರ್ನಾಟಕ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ
ಹಾಯ್ ರಾಮನಗರ (hairamanagara.in) 19 ಫೆಬ್ರವರಿ 2022
ರಾಮನಗರ : ಕರ್ನಾಟಕ ಪ್ರಜಾಪ್ರಭುತ್ವ ವೇದಿಕೆ ರಾಮನಗರ ಜಿಲ್ಲಾ ಘಟಕದ ವತಿಯಿಂದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಫೆ.20ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಪರಿವೀಕ್ಷಣ ಮಂದಿರದಲ್ಲಿ ಆಯೋಜಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸುಬ್ರಹ್ಮಣ್ಯ ದಿನಾಚರಣೆಯನ್ನು ಉದ್ಘಾಟಿಸಲಿದ್ದಾರೆ. ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ರೈಡ್ ನಾಗರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಬಿ.ಆರ್. ಗೋಪಾಲಯ್ಯ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ವಕೀಲ ಬನವಾಸಿ ಗೋಪಾಲ್ ಪ್ರಾಸ್ತಾವಿಕ ನುಡಿಯನ್ನಾಡಲಿದ್ದಾರೆ ಎಂದು ಕರ್ನಾಟಕ ಪ್ರಜಾಪ್ರಭುತ್ವ ವೇದಿಕೆ ರಾಮನಗರ ಜಿಲ್ಲಾ ಘಟಕದ ಅಧ್ಯಕ್ಷ ಪುರುಷೋತ್ತಮ್ ತಿಳಿಸಿದ್ದಾರೆ.
