ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ಬೆಂಗಳೂರಿನಲ್ಲಿ ರಣಕಹಳೆ ಮೊಳಗಿಸಿದ ದಲಿತರು, ಪ್ರಗತಿಪರರು : ನ್ಯಾ. ಮಲ್ಲಿಕಾರ್ಜುನ ಗೌಡ ಪಾಟೀಲ ವಜಾಕ್ಕೆ ಆಗ್ರಹ
ಹಾಯ್ ರಾಮನಗರ (hairamanagara.in) 20 ಫೆಬ್ರವರಿ 2022
ಬೆಂಗಳೂರು : ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ತೆರವು ಮಾಡಿಸಿದ ಆರೋಪಕ್ಕೆ ಗುರಿಯಾಗಿರುವ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾ ಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡಪಾಟೀಲ ಅವರನ್ನು ವಜಾಗೊಳಿಸಬೇಕೆಂದು ದಲಿತರ ಸಂಘಟನೆಯ ಮುಖಂಡರು, ಪ್ರಗತಿಪರರು, ಚಿಂತಕರು ಒಕ್ಕೊರಲಿನಿಂದ ಒತ್ತಾಯಿಸಿ ಸರಕಾರದ ವಿರುದ್ಧ ರಣಕಹಳೆ ಮೊಳಗಿಸಿದರು.
ಶನಿವಾರ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ ನೇತೃತ್ವ ದಲ್ಲಿ ಇಲ್ಲಿನ ಸಿಟಿ ರೈಲ್ವೇ ನಿಲ್ದಾಣ ಮುಂಭಾಗ ಜಮಾಯಿಸಿದ ಸಾವಿರಾರು ಹೋರಾಟಗಾರರು, ವಿಧಾನಸೌಧ, ಹೈಕೋರ್ಟ್ ಚಲೋ ಘೋಷಣೆಯೊಂದಿಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಸಿದರು.
ಬಳಿಕ ಫ್ರೀಡಂಪಾರ್ಕ್ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಜಮಾವಣೆಗೊಂಡ ಹೋರಾಟಗಾರರು, ಸಂವಿಧಾನ ವಿರೋಧಿ ಮಲ್ಲಿಕಾರ್ಜುನ ಗೌಡ ಪಾಟೀಲ್ ಅವರ ವಿರುದ್ಧ ಈ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಎಲ್ಲ ಕೋರ್ಟ್ ಸಭಾಂಗಣಗಳಲ್ಲಿಯೇ ಅಂಬೇಡ್ಕ ರ್ ಅವರ ಭಾವಚಿತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಬೇಕು. ನ್ಯಾಯಾಲಯಗಳಲ್ಲಿ ಮೀಸಲಾತಿ ಕಡ್ಡಾಯಗೊಳಿಸಬೇಕು. ಅದೇ ರೀತಿ, ಹುಮ್ನಾಬಾದ್ ತಹಶೀಲ್ದಾರ್ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸುವಂತೆ ನಿರ್ಣಯಗಳನ್ನು ಒಕ್ಕೊರಲಿನಿಂದ ಅಂಗೀಕರಿಸಿದರು.

ಪ್ರತಿಭಟನಾ ಮೆರವಣಿಯನ್ನು ಉದ್ದೇಶಿಸಿ ಮಾತನಾಡಿದ ಮೈಸೂರು ಉರಿಲಿಂಗಿ ಮಠ ಜ್ಞಾನ ಪ್ರಕಾಶ್ ಸ್ವಾಮೀಜಿ, ಸಂವಿಧಾನ, ಅಂಬೇಡ್ಕರ್ ಅವರನ್ನು ಅವಮಾನಿಸುವ ಹಿಂದೆ ಬಹುದೊಡ್ಡ ಷಡ್ಯಂತ್ರವೇ ಇದೆ. ಹಾಗಾಗಿ, ಸಂವಿಧಾನ ವಿರೋಧಿ ಕೃತ್ಯಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ರಿಗೆ ಪಾಠ ಕಲಿಸಬೇಕು ಎಂದು ತಿಳಿಸಿದರು.
ಬಿಎಸ್ಪಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಮಾತನಾಡಿ, ಇಂದು ಹಲವರು ಅಂಬೇಡ್ಕ ರ್ ಅವರ ಹೆಸರಿನಲ್ಲಿ ಗೆದ್ದು , ಮನುವಾದಿಗಳ ಗುಲಾಮರಾಗಿ ಸೇವೆ ಸಲ್ಲಿಸುತ್ತಿರುವುದು ಖಂಡನೀಯ. ಈ ಹಿಂದೆಯೂ ಅಂಬೇಡ್ಕರ್ ಅವರನ್ನು ಅಪಮಾನಮಾಡಿರುವ ಘಟನೆಗಳ ನಡೆದಿವೆ. ಇದೀಗ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಕ್ರಮ ಕೈಗೊಳ್ಳದಿದ್ದ ರೆ, ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚ ರಿಕೆ ನೀಡಿದರು.

ದಸಂಸ ಮುಖಂಡಮಾವಳ್ಳಿ ಶಂಕರ್ ಮಾತನಾಡಿ, ಮಲ್ಲಿಕಾರ್ಜುನ ಗೌಡ ಅವರನ್ನು ನ್ಯಾ ಯಮೂರ್ತಿ ಎನ್ನುತ್ತಾರೆ. ಆದರೆ ಅವರ ಒಳಗಡೆ ಇರುವುದು ಜಾತಿವಾದಿ ಮನಸ್ಸು . ಬಸವಣ್ಣ ಹಾಗೂ ಕುವೆಂಪು ಅವರ ನಾಡಿನಲ್ಲಿ ಇಂತಹ ಜಾತಿವಾದಿ ಮನಸ್ಸುಗಳು ನ್ಯಾಯಸ್ಥಾನದಲ್ಲಿ ಕುಳಿತಿರುವುದು ಅತ್ಯಂ ತ ಅಪಮಾನಕರ ಸಂಗತಿ ಎಂದು ಟೀಕಿಸಿದರು.
ನ್ಯಾ ಯಾಧೀಶರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ವರ್ಗಾವಣೆ ಶಿಕ್ಷೆಯಲ್ಲ . ಶಿಕ್ಷೆಯಾಗಬೇಕು ಎಂಬುದು ಬಹುದೊಡ್ಡ ಬೇಡಿಕೆ. ಸರಕಾರ ಅನೇಕ ಸುತ್ತೋಲೆಗಳನ್ನು ಹೊರಡಿಸಿದ್ದರೂ ನ್ಯಾಯಾಧೀಶರು ಅಂಬೇಡ್ಕ ರ್ ಭಾವಚಿತ್ರ ತೆಗೆಸಿದ್ದಾರೆ ಎಂದ ಅವರು, ನ್ಯಾ ಯಾಂಗದಲ್ಲಿ ತಳಸಮುದಾಯಗಳಿಗೆ ಪಾಲುದಾರಿಕೆ ಬೇಕಾಗಿದೆ ಎಂದು ಹೇಳಿದರು.
ಚಿಂತಕ, ನಟ ಚೇತನ್ ಮಾತನಾಡಿ, ನಾವು ಬಿಜೆಪಿಯೂ ಅಲ್ಲ , ಕಾಂಗ್ರೆಸ್ಸೂ ಅಲ್ಲ. ನಾವು ಪರ್ಯಾಯ ಶಕ್ತಿಗಳು. ಸದ್ಯ ಈಗ ದೊಡ್ಡ ವಿವಾದ ನಡೆಯುತ್ತಿದೆ. ಆದರೆ, ನಾವು ನೀಲಿ ಶಾಲುಗಳು. ಬದಲಾವಣೆಯೇ ಪರ್ಯಾಯವಾಗಿದೆ. ಈ ಘೋಷಣೆ ರಾಜ್ಯ ಮೂಲೆಮೂಲೆಗೂ ಹರಡುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಿಂತಕರಾದ ಯೋಗಿಶ್ ಮಾಸ್ಟರ್, ಹ.ರಾ.ಮಹೇಶ್, ಹೋರಾಟಗಾರರಾದ ಬಿ.ಗೋಪಾಲ್, ಎಂ. ವೆಂಕಟಸ್ವಾಮಿ, ಜಿಗಣಿ ಶಂಕರ್, ಅಣ್ಣ ಯ್ಯ , ಶ್ರೀ ಧರ್ ಕಲಿವೀರ, ವಿ.ನಾಗರಾಜ್, ಚನ್ನ ಕೃಷ್ಣಪ್ಪ , ಮರಿಯಪ್ಪ , ಹರಿರಾಂ, ಹೆಣ್ಣೂ ರು ಶ್ರೀ ನಿವಾಸ್, ಮಹಾದೇವ ಸ್ವಾ ಮಿ, ಎನ್.ಮೂರ್ತಿ, ಹೆಬ್ಬಾಳ ವೆಂಕಟೇಶ್, ಡಿ.ಶಿವಶಂಕರ್, ಲಕ್ಷ್ಮೀ ನಾರಾಯಣ ನಾಗವಾರ, ಪಾವಗಡ ಶ್ರೀರಾಮ್, ಭೀಮಪುತ್ರಿ ರೇವತಿ ರಾಜ್, ಬಿ.ಆರ್. ಭಾಸ್ಕ ರ್ ಪ್ರಸಾದ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂ ಡಿದ್ದರು.
ಡಾ.ಬಿ.ಆರ್. ಅಂಬೇಡ್ಕ ರ್ ಗೆ ಅಪಮಾನ, ನಮ್ಮ ಕಣ್ಣು ತೆರೆಸಿದೆ :
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ತೆರವುಮಾಡಿಸಿ ಅಪಮಾನಗೈದ ಘಟನೆಯೂ ನಮ್ಮ ಕಣ್ಣು ತೆರೆಸಿದ್ದು, ಈ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಇಲ್ಲಿನ ಫ್ರೀಡಂ ಪಾರ್ಕ್‍ನಲ್ಲಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ-ಕರ್ನಾಟಕ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಭಾವಚಿತ್ರ ಘಟನೆಯನ್ನು ದಲಿತ ಸಮುದಾಯದ ಮುಖಂಡರು ನನಗೆ ಸ್ವ ವಿವರವಾಗಿ ಹೇಳಿದ್ದಾರೆ. ಈ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಚರ್ಚಿಸಿ, ಶೀಘ್ರದಲ್ಲಿಯೇ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗುವುದು ಎಂದು ಅವರು ಹೇಳಿದರು.
ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಘಟನೆ ಖಂಡನೀಯ. ಯಾವ ಕಾರಣದಿಂದಲೂಸಂವಿಧಾನ ಶಿಲ್ಪಿ ಗೆ ಅವಮಾನ ಆಗುವ ರೀತಿ ನಡೆದುಕೊಳ್ಳಬಾರದು ಎಂದ ಅವರು, ಅಂಬೇಡ್ಕ ರ್ ಅವರ ಘನತೆ, ಗೌರವ ಎತ್ತಿ ಹಿಡಿಯುವಲ್ಲಿ ನಾವು ಅತ್ಯಂತ ಮುಂದೆ ಇದ್ದು , ಸಂವಿಧಾನ ಬದ್ಧವಾಗಿ ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ ಎಂದರು.
ಸಂಚಾರ ದಟ್ಟಣೆ ಇಲ್ಲಿನ ಸಿಟಿ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೂ ಬೃಹತ್ ಪ್ರ ತಿಭಟನಾ ಮೆರವಣಿಗೆ ನಡೆಸಿದ ಹಿನ್ನೆಲೆ ಕೆಆರ್ ವೃತ್ತ, ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಶನಿವಾರ ಅಧಿಕಗೊಂಡಿತ್ತು. ಸಾಲು ಸಾಲಾಗಿ ವಾಹನಗಳು ರಸ್ತೆಯ ಮೇಲಿಯೇ ಗಂಟೆ ಗಟ್ಟ ಲೆ ನಿಂತಿದ್ದ ದೃಶ್ಯ ಕಂಡುಬಂದಿತು.