ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿನ ಸ್ಥಾನಗಳನ್ನು ಭರ್ತಿ ಮಾಡಲು ಮಾ.14ರ ವರೆಗೆ ಅವಕಾಶ
ರಾಮನಗರ : 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡಲು ತಾಲ್ಲೂಕು ಲಾಗಿನ್ ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಿ ಅಂತಿಮ ದಿನಾಂಕ ಮುಕ್ತಾಯವಾದ ಕಾರಣ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಮತ್ತು ವೃತ್ತಿಪರ ವಿದ್ಯಾರ್ಥಿಗಳಿಗೆ ತಡವಾಗಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿರುವುದರಿಂದ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ ದೊರಕದ ಹೊಸ ವಿದ್ಯಾರ್ಥಿಗಳಿಗೆ ಜಿಲ್ಲೆಗಳಲ್ಲಿ ಖಾಲಿ ಸ್ಥಾನಗಳು ಉಳಿಕೆಯಾಗಿರುವ ವಿದ್ಯಾರ್ಥಿನಿಲಯಗಳಿಗೆ ಮಾತ್ರ ಅನ್ವಯಿಸುವಂತೆ ಅರ್ಜಿ ಸಲ್ಲಿಸಲು ತಾಲ್ಲೂಕು ಕಲ್ಯಾಣ ಅಧಿಕಾರಿಗಳ ಲಾಗಿನ್ ನಲ್ಲಿ ಮಾರ್ಚ್ 14 ರ ವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಅವಕಾಶವನ್ನು ಆಸಕ್ತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.