ಆಕ್ಸ್ ಫರ್ಡ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಚನ್ನಪಟ್ಟಣ : ದೇಶದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಅನನ್ಯವಾದುದಾದರೂ, ಸ್ತ್ರೀ ಸಮಾಜ ಅವಗಣನೆಗೆ ತುತ್ತಾಗಿದೆ ಎಂದು ವಂದಾರಗುಪ್ಪೆಯ ಬರೋಡಾ ಬ್ಯಾಂಕಿನ ಹಿರಿಯ ವ್ಯವಸ್ಥಾಪಕಿ ಎಸ್. ನಾಗಲಕ್ಷ್ಮಿ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಯಲಚಿಪಾಳ್ಯ ಗ್ರಾಮದ ಆಕ್ಸ್ಫರ್ಡ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಎಲ್ಲಾ ರಂಗಗಳಲ್ಲೂ ಸ್ತೀಯರಿಗೆ ಆದ್ಯತೆ ದೊರೆತಾಗ ಮಾತ್ರವೇ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಪಶುವೈದ್ಯ ಇಲಾಖೆಯ ವೈದ್ಯೆ ರಕ್ಷಿತಾ ಡಿ ಗೌಡ ಮಾತನಾಡಿ, ಮಹಿಳಾ ಸಬಲೀಕರಣದಲ್ಲಿ ಶಿಕ್ಷಣ ಪ್ರಾಮುಖ್ಯತೆ ವಹಿಸುತ್ತದೆ. ಹೆಣ್ಣಿಗೆ ಮದುವೆಯೊಂದೆ ಅಂತಿಮ ಗುರಿಯಾಗಬಾರದು. ಉನ್ನತ ಶಿಕ್ಷಣ ಪಡೆದು ಈ ನೆಲದ ಕಾನೂನು ಅರಿತು, ಉತ್ತಮ ಭವಿಷ್ಯ ಕಟ್ಟಿಕೊಳ್ಳುವಲ್ಲಿ ದಿಟ್ಟ ಹೆಜ್ಜೆ ಇರಿಸಬೇಕು ಎಂದು ತಿಳಿಸಿದರು.
ಚನ್ನಾಂಬಿಕ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಕಾರ್ಯದರ್ಶಿ ಪೂರ್ಣಿಮಾ ನಿಂಗೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಟ್ರಸ್ಟಿ ಡಾ. ಚೇತನ್ ಎನ್ ಗೌಡ ಮತ್ತು ಮುಖ್ಯ ಶಿಕ್ಷಕ ಡಿ. ರಾಮಕೃಷ್ಣ ಹಾಜರಿದ್ದರು.