ಮಾ.11 ರಂದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಮನಗರ ಜಿಲ್ಲಾ ಘಟಕ-ತಾಲ್ಲೂಕು ಘಟಕಗಳ ಉದ್ಘಾಟನೆ : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಶೈಕ್ಷಣಿಕ ಕಾರ್ಯಾಗಾರ
ರಾಮನಗರ : ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಜಿಲ್ಲಾ ಸಂಘದ ವತಿಯಿಂದ ನಗರದ ಕೃಷ್ಣಸ್ಮೃತಿ ಕಲ್ಯಾಣ ಮಂಟಪದಲ್ಲಿ ಮಾರ್ಚ್ 11ರ ಶುಕ್ರವಾರದಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಜಿಲ್ಲಾ ಹಾಗೂ ನಾಲ್ಕು ತಾಲ್ಲೂಕು ಘಟಕಗಳ ಉದ್ಘಾಟನೆ, ಶೈಕ್ಷಣಿಕ ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷೆ ಡಾ. ರತ್ನಮ್ಮ ತಿಳಿಸಿದ್ದಾರೆ.

ಚಿತ್ರನಟಿ, ರಾಷ್ಟ್ರಪ್ರಶಸ್ತಿ ಪುರಸ್ಕೃತೆ ತಾರಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕಿ ಅನಿತಾಕುಮಾರಸ್ವಾಮಿ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರು, ಶಾಸಕರಾದ ಡಿ.ಕೆ. ಶಿವಕುಮಾರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅದ್ಯಕ್ಷೆ ಆರ್. ಪ್ರಮಿಳಾನಾಯ್ಡು, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಡಾ. ಲತಾ ಎಸ್. ಮುಳ್ಳೂರ, ಸಂಸದ ಡಿ.ಕೆ. ಸುರೇಶ್, ಶಾಸಕರಾದ ಎ. ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಸಿ.ಎಂ. ಲಿಂಗಪ್ಪ, ಎಸ್. ರವಿ, ಪುಟ್ಟಣ್ಣ, ಸಿ.ಪಿ. ಯೋಗೇಶ್ವರ್, ಅ. ದೇವೇಗೌಡ, ಕೆಅರ್‍ಐಡಿಎಲ್ ಅಧ್ಯಕ್ಷ ಎಂ.ರುದ್ರೇಶ್, ನಗರಸಭೆ ಅಧ್ಯಕ್ಷೆ ಬಿ.ಸಿ. ಪಾರ್ವತಮ್ಮ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎ. ಇಕ್ಬಾಲ್‍ಹುಸೇನ್ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ. ರಾಕೇಶ್‍ಕುಮಾರ್, ಜಿಪಂ ಸಿಇಓ ಇಕ್ರಂ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ ನಿರ್ದೇಶಕಿ ಸುಮಂಗಲ, ಉಪನಿರ್ದೇಶಕ ಗಂಗಣ್ಣಸ್ವಾಮಿ, ಡಯಟ್‍ನ ಉಪನಿರ್ದೇಶಕ ಲೋಹಿತೇಶ್ವರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಸತೀಶ್, ಮಾಜಿ ಅಧ್ಯಕ್ಷ ಆರ್.ಕೆ. ಬೈರಲಿಂಗಯ್ಯ, ಬಿಇಓಗಳಾದ ಜೆ.ಎಂ.ಜಯಲಕ್ಷ್ಮಿ, ಎಂ.ಜೆ.ಕುಮಾರಸ್ವಾಮಿ, ಬಿ.ಎನ್. ಮರೀಗೌಡ, ಯತಿಕುಮಾರ್ ಸೇರಿದಂತೆ ಹಲವು ಗಣ್ಯರು ಇಲಾಖಾ ಅಧಿಕಾರಿಗಳು, ಜಿಲ್ಲೆ ಮತ್ತು ನಾಲ್ಕು ತಾಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಖಜಾಂಚಿಗಳು ಹಾಗೂ ಎಲ್ಲಾ ಪದಾಧಿಕಾರಿಗಳು, ವಿವಿಧ ವೃಂದಗಳ ಮುಖ್ಯಸ್ಥರು, ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.