ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆದಿಕಾರಿಗಳ ವೇತನ ಸಮಿತಿ ಆಯೋಗ ರಚನೆ : ಮುಖ್ಯಮಂತ್ರಿಯವರಿಗೆ ನೌಕರರ ಪರವಾಗಿ ಅಭಿನಂದನೆ ಸಲ್ಲಿಸಿದ ಷಡಾಕ್ಷರಿ, ಕೆ. ಸತೀಶ್

ರಾಮನಗರ : ರಾಜ್ಯ ಸರ್ಕಾರದಲ್ಲಿ ಖಾಲಿಯಿರುವ ಹುದ್ದೆಗಳ ಕಾರ್ಯಭಾರದ ಒತ್ತಡದ ನಡುವೆಯೂ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ಸರ್ಕಾರಕ್ಕೆ ಉತ್ತಮ ಕರ್ತವ್ಯ ನಿರ್ವಹಿಸಿ ಸರ್ಕಾರಕ್ಕೆ ಉತ್ತಮ ಕೀರ್ತಿ ತರುತ್ತಿರುವ ರಾಜ್ಯ ಸರ್ಕಾರಿ ನೌಕರರ ಸೇವೆಯನ್ನು ಪ್ರಶಂಸಿಸಿದ ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ನಾನು 2022 – 23  ನೇ ಸಾಲಿನ ಆಯ-ವ್ಯಯದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆಗಳನ್ನು ಪರಿಷ್ಕರಣೆ ಬಗ್ಗೆ ಪ್ರಸ್ತಾಪಿಸಿರಲಿಲ್ಲ, ಅದಾಗ್ಯೂ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ನೀಡಿದ ವಾಗ್ದಾನ ಹಾಗೂ ಹುದ್ದೆಗಳಿದ್ದಾಗ್ಯೂ ಕರ್ತವ್ಯನಿರತ ನೌಕರರ ಪರಿಶ್ರಮವನ್ನು ಪರಿಗಣಿಸಿ ಕೇಂದ್ರ ಸರಕಾರಿ ನೌಕರರಿಗೆ ಸರಿಸಮಾನವಾದ ವೇತನ ಭತ್ಯೆಗಳನ್ನು ಪರಿಷ್ಕರಣೆ ಮಾಡಲು ಅಧಿಕಾರಿಗಳ ವೇತನ ಸಮಿತಿ ಹಾಗೂ ವೇತನ ಆಯೋಗ ರಚನೆ ಮಾಡುವುದಾಗಿ ಘೋಷಣೆ ಮಾಡಿರುತ್ತಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಕಳೆದ 40 ವರ್ಷಗಳಿಂದ ಕೇಂದ್ರ ಮಾದರಿ ವೇತನ ಭತ್ಯೆಗಳನ್ನು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿತ್ತು. ಸಂಘದ ಸುದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿ ಕೇಂದ್ರ ಸರ್ಕಾರಕ್ಕೆ ಸರಿಸಮಾನವಾದ ವೇತನ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಪರಿಷ್ಕರಣೆ ಮಾಡಲು ಅಧಿಕಾರಿಗಳ ವೇತನ ಸಮಿತಿ/ ವೇತನ ಆಯೋಗ ರಚಿಸುವ ನಿರ್ಧಾರ ಕೈಗೊಂಡಿರುವುದು ಅತ್ಯಂತ ಸ್ವಾಗತಾರ್ಹ. ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಸಂಭ್ರಮಿಸುತ್ತಿದ್ದಾರೆ.

ಸರ್ಕಾರದ ಈ ನಿರ್ಧಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿ ಪ್ರಥಮ ಹಾಗೂ ಐತಿಹಾಸಿಕವಾಗಿದ್ದು ಬಸವರಾಜ ಬೊಮ್ಮಾಯಿ ಹಾಗೂ  ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ನೀಡುವಂತೆ ಒತ್ತಾಯಿಸಿ ಪ್ರಸ್ತಾವನೆಯನ್ನು ಮಂಡಿಸಿದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರಿಗೆ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ರಾಜ್ಯದ ಎಲ್ಲ ಶಾಸಕರುಗಳಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ  ಷಡಾಕ್ಷರಿ ಹಾಗೂ  ಜಿಲ್ಲಾ ಅಧ್ಯಕ್ಷರಾದ ಸತೀಶ್ ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *