ತಾಯಿ ಅವರಿಗೆ ಐಟಿ ನೊಟೀಸ್ ನೀಡಿರುವ ಬಗ್ಗೆ ಆತಂಕ ಇಲ್ಲ : ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ತಮ್ಮ ತಾಯಿ ಅವರಿಗೆ ಆದಾಯ ತೆರಿಗೆ ನೋಟಿಸ್ ನೀಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ವಿಧಾನಸೌಧದ ಬಳಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ ಅಗತ್ಯವೂ ಇಲ್ಲ” ಎಂದರು.

ದೇವೆಗೌಡರ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದು ಮಹತ್ವ ಕೊಟ್ಟಿಲ್ಲ. ನಾವು ಸಹ ನಮ್ಮ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದೂ ಪ್ರಾಮುಖ್ಯತೆ ಕೊಟ್ಟವರಲ್ಲ. ನಾವು ಪರಿಶುದ್ಧವಾಗಿರಬೇಕು ಅಷ್ಟೇ. ನೋಟಿಸ್ ಕೊಟ್ಟಿದ್ದಾರೆ, ಅದಕ್ಕೆ ಏನು ಉತ್ತರ ಕೊಡಬೇಕೋ ಕೊಟ್ಟರಾಯಿತು. ನನ್ನ ಸಹೋದರ ರೇವಣ್ಣ ಅವರಿಗೂ ಇದನ್ನೇ ಹೇಳಿದ್ದೇನೆ. ಇದನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಆದಾಯ ತೆರಿಗೆ ಬಗ್ಗೆ ಕಾನೂನಾತ್ಮಕವಾಗಿ ಆಸ್ತಿ ವಿಚಾರವಾಗಿ ಕೇಳಿರುತ್ತಾರೆ. ಆ ವಿವರಗಳನ್ನು ಸಲ್ಲಿಕೆ ಮಾಡಿದರೆ ಆಯಿತು ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *