ಕರ್ನಾಟಕ ವೀರಶೈವ ಲಿಂಗಾಯತ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ

ರಾಮನಗರ : ಕರ್ನಾಟಕ ವೀರಶೈವ ಲಿಂಗಾಯತ ನಿಗಮದ ವತಿಯಿಂದ 2021-22 ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ 3ಬಿ ಗೆ ಒಳಪಡುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು, ಕನಿಷ್ಠ 2 ಎಕರೆ ಹಾಗೂ  ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿಸಣ್ಣ ರೈತರಾಗಿರಬೇಕು.

ವಾರ್ಷಿಕ ವರಮಾನ ರೂ.40,000/- ಗಳ ಮಿತಿಯಲ್ಲಿರಬೇಕು. ಆಸಕ್ತರು ಏಪ್ರಿಲ್ 25 ರ ಒಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಕರ್ನಾಟಕ ವೀರಶೈವ ಲಿಂಗಾಯತ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಛೇರಿ #102, ಮೊದಲನೇ ಮಹಡಿ, 3ನೇ ಕ್ರಾಸ್, ಉತ್ತರ ಬಡಾವಣೆ, 1ನೇ ಫೇಸ್, ರತ್ನಾಕರ ಬ್ಯಾಂಕ್ ಪಕ್ಕ, ಬಿ.ಎಂ ರಸ್ತೆ, ರಾಮನಗರ ಟೌನ್ ಅಥವಾ ಇಲಾಖಾ ವೆಬ್ ಸೈಟ್ : www.dbcdc.karnatak.gov.in. ದೂರವಾಣಿ ಸಂಖ್ಯೆ: 080-27271554 ಅನ್ನು ಸಂಪರ್ಕಿಸಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *